Ad Widget .

ಕುಶಾಲನಗರ: ಹೊತ್ತಿ ಉರಿದ ‘ಪೂರ್ವಿಕಾ ಮೊಬೈಲ್’ ಶೋರೂಂ| ಲಕ್ಷಾಂತರ ರೂ. ಮೊಬೈಲ್ ಸಾಮಾಗ್ರಿ ನಷ್ಟ|

Ad Widget . Ad Widget .

ಕೊಡಗು : ಕುಶಾಲನಗರದ ಪೂರ್ವಿಕಾ ಮೊಬೈಲ್ ಮಳಿಗೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಬೆಲೆ ಬಾಳುವಂತ ಮೊಬೈಲ್ ಮತ್ತು ಇತರೆ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿರೋ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

Ad Widget . Ad Widget .

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಕಂಡ ದಾರಿಹೋಕರು, ಅಗ್ನಿ ಶಾಮಕ ಅಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡದ ಅಧಿಕಾರಿಗಳು 2 ಗಂಟೆಗೂ ಹೆಚ್ಚುಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದ್ದು, ಮಳಿಗೆಯಲ್ಲಿದ್ದಂತ ಮೊಬೈಲ್ ಸೇರಿದಂತೆ ಲಕ್ಷಾಂತರ ರೂಪಾಯಿ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮಗೊಂಡಿವೆ. ಈ ಸಂಬಂಧ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *