ಮುಸ್ಲಿಂ ಮಹಿಳೆಯರ ‘ಹೃದಯ’ ಕದ್ದ ಸಚಿವೆ ಜೊಲ್ಲೆ| ಆರೋಗ್ಯಕ್ಕಾಗಿ ವಿಶೇಷ ಸಹಾಯಧನ|

Ad Widget ... ..

ಬೆಂಗಳೂರು : ರಾಜ್ಯ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಸ್ಲಿಂ ಮಹಿಳೆಯರಿಗೆ ಹೃದಯ ಹಾಗೂ ಕ್ಯಾನ್ಸರ್ ರೋಗ ಚಿಕಿತ್ಸೆಗೆ 1 ಲಕ್ಷ ರೂ. ಸಹಾಯಧನ ನೀಡಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

Ad Widget

ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಕಮಿಟಿಯಲ್ಲಿ 105 ಕೋಟಿ ಅನುದಾನ ಇದೆ. ಬಡ ಮುಸ್ಲೀಂ ಸಮುದಾಯದವರಿಗೆ ಶೇ 5 % ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಮುಸ್ಲಿಂ ಮಹಿಳೆಯರಿಗೆ ಹೃದಯ ಹಾಗೂ ಕ್ಯಾನ್ಸರ್ ರೋಗ ಚಿಕಿತ್ಸೆಗೆ 1 ಲಕ್ಷ ರೂ. ಸಹಾಯಧನ ನೀಡಲಾಗುವುದು. ವಕ್ಪ್ ಮಂಡಳಿಗೆ ಈ ಸಾರಿ 1.74 ಕೋಟಿ ರೂ. ಅನುದಾನ ನೀಡಲಾಗಿದೆ. ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ ನೀಡುವುದು ವಿಳಂಬವಾಗದಂತೆ ನೋಡಿಕೊಳ್ಳಲಾಗುವುದು. ಈ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ ಎಲ್ಲರಿಗೂ ಯೋಜನೆ ತಲುಪಿಸಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಹಜ್ ಯಾತ್ರೆಗೆ ಪ್ರತಿ ವರ್ಷ ಹೋಗಲು ಅವಕಾಶ ಇದೆ. ಸೌದಿ ಅರೇಬಿಯಾಕ್ಕೆ ಹೋಗಲು ಬೇಕಾದ ಅವಶ್ಯ ಮಾಹಿತಿಯನ್ನು ಹಜ್ ಮಂಡಳಿ ಮಾಡುತ್ತದೆ. 1965 ರಲ್ಲಿ 8 ಜನ ಸದಸ್ಯರನ್ನೊಳಗೊಂಡ ಹಜ್ ಸಮಿತಿ ರಚನೆಯಾಗಿದೆ. 2019-2021 ರಲ್ಲಿ ಕೊವಿಡ್ ಕಾರಣದಿಂದ ಹಜ್ ಯಾತ್ರಿಕರು ಹಜ್ ಪ್ರವಾಸ ಕೈಗೊಂಡಿಲ್ಲ. ಹೀಗಾಗಿ ಹಜ್ ಭವನವನ್ನು ಕೊವಿಡ್ ಕೇರ್ ಸೆಂಟರ್ ಮಾಡಿ ಎಲ್ಲ ಸಮುದಾಯದವರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *