Ad Widget .

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ| ರಾಜ್ ಕುಂದ್ರಾ ಕಂಪೆನಿ ನಿರ್ದೇಶಕ ಅರೆಸ್ಟ್

Ad Widget . Ad Widget .

ಮುಂಬೈ : ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಅವರ ಕಂಪನಿಯ ನಿರ್ದೇಶಕ ಅಭಿಜಿತ್ ಬೊಂಬ್ಲೆ ಎಂಬವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಅಶ್ಲೀಲ ಚಿತ್ರ ನಿರ್ಮಾಣದ ಆರೋಪದಲ್ಲಿ ರಾಜ್ ಕುಂದ್ರಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ರೂಪದರ್ಶಿಯೊಬ್ಬರು ನೀಡಿದ್ದ ದೂರಿನ ಆಧಾರದಲ್ಲಿ ಮಾಲ್‌ವಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಕಿರುಚಿತ್ರಗಳು ಮತ್ತು ವೆಬ್ ಸೀರೀಸ್‌ಗಳಲ್ಲಿ ನಟಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿ ಬಳಿಕ ನಗ್ನ ದೃಶ್ಯಗಳಲ್ಲಿ ನಟಿಸುವಂತೆ ಒತ್ತಡ ಹೇರಲಾಗಿತ್ತು ಎಂದು ರೂಪದರ್ಶಿ ದೂರಿನಲ್ಲಿ ತಿಳಿಸಿದ್ದರು. ಬೊಂಬ್ಲೆ ಕೂಡ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಜುಲೈ 19 ರಂದು ರಾಜ್ ಕುಂದ್ರಾ ಬಂಧನದ ಬಳಿಕ ಇದುವರೆಗೂ ಪ್ರಕರಣ ಸಂಬಂಧ ಸುಮಾರು 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಇದುರವರೆಗೆ ಪೊಲೀಸರು ಇವರನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *