Ad Widget .

ಶೀಘ್ರದಲ್ಲೇ ಪ್ರಾಥಮಿಕ ತರಗತಿಗಳೂ ಪ್ರಾರಂಭ – ಮಕ್ಕಳಿಗೆ ಕೋವಿಡ್ ವರದಿ ಕಡ್ಡಾಯವಲ್ಲ – ಶಿಕ್ಷಣ ಸಚಿವ ಬಿ.ಸಿ ನಾಗೇಶ್.

Ad Widget . Ad Widget .

ಮೈಸೂರು: ವಿದ್ಯಾರ್ಥಿಗಳಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ

Ad Widget . Ad Widget .

ಒಂದು ವೇಳೆ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟರೆ ಒಂದು ವಾರ ತರಗತಿ ಅಮಾನತು ಮಾಡಲಾಗುತ್ತದೆ. ಸ್ಯಾನಿಟೈಸ್ ಮಾಡಿ ವಾರದ ನಂತರ ಮತ್ತೆ ತರಗತಿಗಳನ್ನು ಆರಂಭಿಸಲಾಗುವುದು. ಶಾಲೆ ಆರಂಭಿಸುವುದರಲ್ಲಿ ತೊಂದರೆ ಇದೆ ಆದರೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ತಜ್ಞರ ಅಭಿಪ್ರಾಯದಂತೆ ಶಾಲೆಗಳನ್ನು ಆರಂಭ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕೊರೋನಾ ಮಕ್ಕಳ ಮೇಲೆ ದೊಡ್ಡ ಪರಿಣಾಮ ಬೀರುವುದಿಲ್ಲ. ಪ್ರಾಣಹಾನಿಯಂತಹ ಸಮಸ್ಯೆಗಳು ಎದುರಾಗುವುದಿಲ್ಲ. ಒಂದರಿಂದ ಎಂಟನೇ ತರಗತಿಯನ್ನೂ ಕೂಡ ಶೀಘ್ರದಲ್ಲೇ ಆರಂಭಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕೋವಿಡ್ ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭ ಮಾಡುವುದಿಲ್ಲ. ಆ ಮಕ್ಕಳಿಗೆ ಪರ್ಯಾಯ ಶಿಕ್ಷಣದ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *