Ad Widget .

ದೇವಾಲಯಗಳಲ್ಲಿ ಆನೆಗಳನ್ನು ಬಳಸುವುದಕ್ಕೆ ಹೈಕೋರ್ಟ್ ವಿರೋಧ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು: ನಗರದ ವಿದ್ಯಾರಣ್ಯಪುರದ ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ಕೆ ಬಳಸಲು ಆನೆಯನ್ನು ಇರಿಸಿಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್‌, ಆನೆಗಳು ಕಾಡಿನಲ್ಲಿ ಇರಬೇಕು ಹೊರತು ದೇವಸ್ಥಾನದಲ್ಲಿ ಅಲ್ಲ.
ಪೂಜಾ ಕಾರ್ಯಕ್ರಮಕ್ಕೆ ಆನೆಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ ಆಗುತ್ತದೆ ಎಂದು ತೀಕ್ಷ್ಣವಾಗಿ ಹೇಳಿತು.

Ad Widget . Ad Widget . Ad Widget .

ಈ ಕುರಿತು ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾ. ಎ.ಎಸ್.ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನವು ಖಾಸಗಿ ದೇವಾಲಯವಾಗಿದೆ. ಅಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲು ಆನೆಯೊಂದನ್ನು ತಂದು ಪೋಷಿಸಲಾಗುತ್ತಿತ್ತು. ಇದೀಗ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದ ಕಾರಣ ಆನೆಯೂ ಸರ್ಕಾರದ ವಶದಲ್ಲಿದೆ. ಅದನ್ನು ಸ್ಥಳಾಂತರಿಸದೇ ದೇವಸ್ಥಾನದಲ್ಲಿಯೇ ಇರಿಸಲು ಮುಜರಾಯಿ ಇಲಾಖೆಗೆ ನಿರ್ದೇಶಿಸಬೇಕು ಎಂದುಕೋರಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಆನೆಗಳು ಕಾಡಿನಲ್ಲಿರಬೇಕೇ ಹೊರತು ದೇಗುಲಗಳಲ್ಲಲ್ಲ ಎಂದಿತು. ಕೇವಲ ಪೂಜಾ ಕಾರ್ಯಕ್ರಮ ನೆರವೇರಿಸಲು ಅದನ್ನು ಬಳಕೆ ಮಾಡಲಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರು ಸಮರ್ಥನೆ ನೀಡಿದರು.

ಆನೆಯನ್ನು ದೇವಸ್ಥಾನದಲ್ಲಿರಿಸಿ ಪೂಜಾ ಕಾರ್ಯಕ್ರಮಕ್ಕೆ ಬಳಸುವುದು ಎಷ್ಟು ಸರಿ ಎಂದು ಪೀಠ ಖಾರವಾಗಿ ಪ್ರಶ್ನಿಸಿತು. ಅದಕ್ಕೆ ವಕೀಲರು ಈ ಪದ್ಧತಿ ಹಿಂದಿನಿಂದಲೂ ಜಾರಿಯಲ್ಲಿದೆ ಎಂದರು. ಆಕ್ಷೇಪಿಸಿದ ಪೀಠ, ಹಿಂದಿನ ಕಾಲದಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಜಾರಿಯಲ್ಲಿರಲಿಲ್ಲ. ಇದೀಗ ಆ ಕಾಯ್ದೆ ಜಾರಿಯಲ್ಲಿದೆ. ಪದ್ಧತಿ ಇತ್ತು ಎಂದು ಮುಂದುವರಿಸುತ್ತೀರಿ ಎನ್ನುವುದಾದರೆ ಒಪ್ಪಲಾಗದು ಎಂದು ಹೇಳಿತು.

Leave a Comment

Your email address will not be published. Required fields are marked *