Ad Widget .

ಮಹಿಳೆಯರನ್ನು ಚುಡಾಯಿಸುತ್ತಿದ್ದವನಿಗೆ ಗ್ರಾಮಸ್ಥರು ಕೊಟ್ಟ ಶಿಕ್ಷೆ ಏನ್ ಗೊತ್ತ?

Ad Widget . Ad Widget .

ಚಿಕ್ಕೋಡಿ: ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿ ಗ್ರಾಮಸ್ಥರು ಬುದ್ಧಿ ಕಲಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹೇಶವಾಡಗಿ ಗ್ರಾಮದಲ್ಲಿ ನಡೆದಿದ್ದರೆ, ಇನ್ನೊಂದೆಡೆ ಮಹಿಳೆಯನ್ನು ಕೊಲೆ ಮಾಡಿ ರಸ್ತೆ ಬದಿಗೆ ಬೀಸಾಕಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ವಾಟ್ಸಪ್ ನಲ್ಲಿ ಅಸಹ್ಯವಾಗಿ ಮೆಸೇಜ್ ಮಾಡುತ್ತಿದ್ದ ಸುಧಾಕರ್ ಡುಮ್ಮಗೋಳ ಎಂಬಾತನಿಗೆ ಗ್ರಾಮಸ್ಥರೆಲ್ಲರೂ ಸೇರಿ ಧರ್ಮದೇಟು ನೀಡಿ ತಲೆ ಬೋಳಿಸಿ ಪಾಠ ಕಲಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಖಯಾಲಿ ಮುಂದುವರೆಸಿದ್ದ ಸುಧಾಕರನಿಗೆ ವಾರ್ನಿಂಗ್ ಮಾಡಿದರೂ ಸಹ ಕೇಳದ ಸುಧಾಕರನನ್ನು ಹಿಡಿದು ಗ್ರಾಮಸ್ಥರು ತಲೆ ಬೋಳಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಘಟನೆಯಿಂದ ಅವಮಾನಗೊಂಡ ಸುಧಾಕರ್ ಇದೀಗ ಊರು ಬಿಟ್ಟು ತಲೆ ಮರೆಸಿಕೊಂಡಿದ್ದಾನೆ. ಅಲ್ಲದೇ ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತೊಂದೆಡೆ ಕೊಲೆ ಮಾಡಿ ರಸ್ತೆ ಪಕ್ಕದಲ್ಲಿ ಮಹಿಳೆಯ ಶವ ಎಸೆದು ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿ 31ರ ಪಕ್ಕದ ಕಬ್ಬಿನ ಗದ್ದೆಯಲ್ಲಿ ದುಷ್ಕರ್ಮಿಗಳು ಶವ ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಅಂದಾಜು 35 ವರ್ಷದ ಅಪರಚಿತ ಮಹಿಳೆಯ ಶವವನ್ನು ಬೀಸಾಕಿ ಹೋಗಿರುವ ಕಾರಣ ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮಹಿಳೆಯ ಪರಿಚಯ ಸಿಗುತ್ತಿದ್ದಂತೆ ದುಷ್ಕರ್ಮಿಗಳ ಹುಡುಕಾಟಕ್ಕೆ ಬಲೆ ಬೀಸಲಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *