ಚಾಮರಾಜನಗರ : ರಾಜ್ಯದ ಜನತೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ವಿಮಾ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಯಶಸ್ವಿನಿ ಯೋಜನೆಯನ್ನು ಆಯುಷ್ಮಾನ್ ಯೋಜನೆ ಜೊತೆ ವಿಲೀನಗೊಳಿಸಲಾಗಿದೆ. ಈಗ ಅದನ್ನು ಪ್ರತ್ಯೇಕಿಸಲು 300 ಕೋಟಿ ರೂ ಬೇಕಾಗಿರುವುದರಿಂದ ಇಲಾಖೆಯವರು ಒಪ್ಪಿರಲಿಲ್ಲ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಬಾರಿ ಬಜೆಟ್ ನಲ್ಲಿ ಸೇರಿಸಲು ಪ್ರಯತ್ನಿಸಿದ್ದೆ, ಕಾರಣಾಂತರಗಳಿಂದ ಆಗಿರಲಿಲ್ಲ ಈಗ ಮತ್ತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಯಶಸ್ವಿನಿ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಲು ಅಪೇಕ್ಷಿಸಿದ್ದೇನೆ ಎಂದರು.
ಸದ್ಯದಲ್ಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಹಕಾರ ಇಲಾಖೆಯ ಪರಿಶೀಲನಾ ಸಭೆ ನಡೆಸಲಿದ್ದಾರೆ ಈ ಸಭೆಯಲ್ಲಿ ಯಶಸ್ವಿನಿ ವಿಮಾ ಯೋಜನೆ ಕುರಿತಂತೆ ಗಮನಕ್ಕೆ ತರಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಸಿದ್ದಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.