ಉಪ್ಪಿನಂಗಡಿ: ಇಲ್ಲಿನ ಹಳೆಗೇಟು ಬಳಿ ಇರುವ ಮೀನಿನ ಅಂಗಡಿಯೊಂದಕ್ಕೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಇದು ಅಶೋಕ್ ಎಂಬವರಿಗೆ ಸೇರಿದ ಮೀನಿನ ಅಂಗಡಿಯಾಗಿದೆ. ಭಾನುವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟ ಮೀನು ಸುಟ್ಟು ಹೋಗಿವೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು, ಪುತ್ತೂರು ತಾಲೂಕು ಶಾಸಕ ಸಂಜೀವ ಮಠಂದೂರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

ಸೋಮವಾರ ಬೆಳಗ್ಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು ಕಿಡಿಗೇಡಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ.
ವೈಯಕ್ತಿಕ ದ್ವೇಷದ ಹಿನ್ನಲೆ ಈ ಕೃತ್ಯ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.