Ad Widget .

ಸುಳ್ಳು ವರದಕ್ಷಿಣೆ ಆರೋಪ| ಸೊಸೆಯ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ

ಪಂಜಾಬ್: ವರದಕ್ಷಿಣೆ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ, ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೋ ಮಹಿಳೆಯರ ಕತೆಗಳನ್ನು ಕೇಳುತ್ತಲೇ ಇರುತ್ತೇವೆ.

Ad Widget . Ad Widget .

ಪಂಜಾಬ್​ನ ಲುಧಿಯಾನದ 60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಸೊಸೆ ಮಾಡಿದ ಸುಳ್ಳು ವರದಕ್ಷಿಣೆ ಆರೋಪದಿಂದ ಅವಮಾನಗೊಂಡು, ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳಂತೆ ನೋಡಿಕೊಳ್ಳುತ್ತಿದ್ದ ಸೊಸೆ ವರದಕ್ಷಿಣೆ ಆರೋಪ ಮಾಡಿ, ಪೊಲೀಸರಿಗೆ ದೂರು ನೀಡುತ್ತೇವೆಂದು ಹೇಳಿದ್ದನ್ನು ಸಹಿಸಲಾಗದೆ ಆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ.

Ad Widget . Ad Widget .

60 ವರ್ಷದ ಆ ವ್ಯಕ್ತಿಗೆ ಸೊಸೆ ಹಾಗೂ ಆಕೆಯ ಮನೆಯವರು ಬೆದರಿಕೆಯೊಡ್ಡಿದ್ದರು. ಹಾಗೇ, ಹೊಡೆದು ದೈಹಿಕ ಹಿಂಸೆಯನ್ನೂ ಮಾಡಿದ್ದರು. ಇಡೀ ಕುಟುಂಬದ ವಿರುದ್ಧ ವರದಕ್ಷಿಣೆ ಕೇಸ್ ದಾಖಲಿಸುವುದಾಗಿ ಹೆದರಿಸಿದ್ದರು. ಇದರಿಂದ ಆತಂಕಗೊಂಡಿದ್ದ ಅವರು ಈ ಸುಳ್ಳು ಕೇಸ್​ನಿಂದ ತಮ್ಮ ಮರ್ಯಾದೆ ಹೋಗುತ್ತದೆ ಎಂಬ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಹೆಂಡತಿ ತಿಳಿಸಿದ್ದಾರೆ.

ಸೊಸೆಯ ಮನೆಯವರು ಬ್ಲಾಕ್​ಮೇಲ್ ಮಾಡಿದ್ದರಿಂದ ನೊಂದಿದ್ದ ಆ ವ್ಯಕ್ತಿ ಮನೆಗೆ ಬಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಹೆಂಡತಿ ತಕ್ಷಣ ಪಕ್ಕದ ಮನೆಯವರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸುಟ್ಟ ಗಾಯಗಳಿಂದ ಅವರು ಸಾವನ್ನಪ್ಪಿದ್ದರು. ಒಂದೂವರೆ ವರ್ಷದ ಹಿಂದೆ ಅವರ ಮಗನಿಗೆ ಮದುವೆಯಾಗಿತ್ತು. ಅವರಿಗೆ 6 ತಿಂಗಳ ಮಗಳು ಕೂಡ ಇದ್ದಾಳೆ. ಮದುವೆಯಾದ ಕೂಡಲೇ ಅತ್ತೆ-ಮಾವನ ಮೇಲೆ ದೌರ್ಜನ್ಯ ನಡೆಸಲು ಶುರು ಮಾಡಿದ್ದ ಸೊಸೆ ತನ್ನ ಗಂಡನೊಂದಿಗೆ ಬೇರೆ ಮನೆಯಲ್ಲಿ ವಾಸವಾಗಿದ್ದಳು. ಇದೇ ವಿಷಯಕ್ಕೆ ಅತ್ತೆ-ಮಾವ ಹಾಗೂ ನಡುವೆ ಜಗಳವಾಗುತ್ತಿತ್ತು. ಇತ್ತೀಚೆಗೆ ಆಕೆಯ ಪೋಷಕರು ಆಕೆಯ ಅತ್ತೆ-ಮಾವನ ಮೇಲೆ ಹಲ್ಲೆಯನ್ನೂ ಮಾಡಿದ್ದರು.

Leave a Comment

Your email address will not be published. Required fields are marked *