ಸುಳ್ಯ: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಸಮೀಪ ಸುಳ್ಯದಿಂದ ಕೊಯನಾಡಿಗೆ ಹೋಗುತ್ತಿದ್ದ ಬೈಕ್ ದನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲಿ ಸಾವಿಗೀಡಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಗಾಯಗೊಂಡವರನ್ನು ಕೊಯಿನಾಡು ಪರಿಸರದ ಸವಾದ್ ಹಾಗೂ ಮಿರ್ಷದ್ ಎಂದು ಗುರುತಿಸಲಾಗಿದೆ.
ಈ ಇಬ್ಬರು ಯುವಕರು ಮಂಗಳೂರಿಗೆ ಹೋಗಿದ್ದು ಸಂಜೆ ಮರಳಿ ಬರುವ ಸಂದರ್ಭದಲ್ಲಿ ಗೂನಡ್ಕ ಸಮೀಪ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಸತ್ತ ಹಸುವಿನ ಕಳೆಬರ
ಅಪಘಾತದಿಂದ ಸವಾದ್ ರವರಿಗೆ ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಮಿರ್ಸದ್ ರವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಸುಳ್ಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.