Ad Widget .

ಮೈಸೂರು| ಚಾಮುಂಡಿ ಬೆಟ್ಟದ ತಪ್ಪಲಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್| ಬೆಚ್ಚಿಬಿದ್ದ ಸಾಂಸ್ಕೃತಿಕ ನಗರಿ|

Ad Widget . Ad Widget .

ಮೈಸೂರು, ಆಗಸ್ಟ್ 25: ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಸಾಂಸ್ಕೃತಿಕ‌ ನಗರಿ ಮೈಸೂರು ಇದೀಗ ಕ್ರೈಂ ಸಿಟಿಯಾಗಿ ಬದಲಾಗುತ್ತಿದೆ. ಒಂದು ಕಾಲದಲ್ಲಿ ಪೆನ್ಷನರ್ಸ್ ಪ್ಯಾರಡೈಸ್ ಎನಿಸಿದ್ದ ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಮೈಸೂರಿಗರನ್ನು ಬೆಚ್ಚಿಬೀಳಿಸಿದೆ.

Ad Widget . Ad Widget .

ಹೊರ ರಾಜ್ಯಗಳಲ್ಲಿ ಹೆಚ್ಚಾಗಿ ನಡೆಯುತ್ತಿದ್ದ ಗ್ಯಾಂಗ್ ರೇಪ್ ಪ್ರಕರಣ ಇದೀಗ ಮೈಸೂರಿಗೂ ವಕ್ಕರಿಸಿದೆ. ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ.

ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ ವೇಳೆ ಐದಾರು ಮಂದಿ ಯುವಕರ ತಂಡ ಆಕೆಯ ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ.

6 ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ, ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ವರದಿಯಾಗಿದೆ.

ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ಆರೋಪಿಗಳ ಪತ್ತೆಗೆ ಮೈಸೂರು ಪೊಲೀಸರು ಬಲೆ ಬೀಸಿದ್ದಾರೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ​ ಪ್ರಕರಣದ ಆರೋಪಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಂತ್ರಸ್ತೆ ಸ್ನೇಹಿತನಿಂದ ಮಾಹಿತಿ ಪಡೆಯುತ್ತಿದ್ದಾರೆ. ಅತ್ಯಾಚಾರ ಎಸಗಿದವರು ಪರಿಚಯಸ್ಥರೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್​ ಪ್ರಕರಣವು ಲಲಿತಾದ್ರಿಪುರದ ಹೊರವಲಯದಲ್ಲಿ ನಡೆದಿತ್ತು ಎಂದು ತಿಳಿದುಬಂದಿದೆ. ನಾಲ್ಕು ಅಥವಾ ಐದು ಜನರಿಂದ ರೇಪ್ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಜೊತೆಗೆ ಬಂದಿದ್ದ ವಿದ್ಯಾರ್ಥಿನಿ ಸ್ನೇಹಿತನಿಗೆ ಹಲ್ಲೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದ್ದು, ಇದೀಗ ವಿದ್ಯಾರ್ಥಿನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸದ್ಯ ಸ್ಥಳಕ್ಕೆ ಭೇಟಿ‌ ನೀಡಿ ಪೊಲೀಸರಿಂದ ಪರಿಶೀಲನೆ ನಡೆಸಲಾಗಿದೆ. ನಿರ್ಜನ‌ ಪ್ರದೇಶವಾಗಿರುವ ಘಟನಾ ಸ್ಥಳದಲ್ಲಿ ಪಾನಮತ್ತರಾಗಿ ಅತ್ಯಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *