Ad Widget .

ಹೆದ್ದಾರಿಯಿಂದ 40 ಮೀ. ಒಳಗಡೆ ಕಟ್ಟಡ ನಿರ್ಮಿಸುವಂತಿಲ್ಲ – ಹೈಕೋರ್ಟ್ ಮಹತ್ವದ ಆದೇಶ

Ad Widget . Ad Widget .

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಿಂದ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ.

Ad Widget . Ad Widget .

ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಕಟ್ಟಡ ರಹಿತ ವಲಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು 1999 ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಈ ಬಗ್ಗೆ ಆದೇಶಿಸಿತ್ತು.
ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಉಡುಪಿಯ ಕಾಪು ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಟ್ಟಡವನ್ನು ನಿರ್ಮಿಸಲಾಗಿತ್ತು. ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಹೈಕೋರ್ಟ್ ಈ ಆದೇಶವನ್ನು ಪ್ರಕಟಿಸಿದೆ.

60 ದಿನಗಳಲ್ಲಿ ಅತಿಕ್ರಮಿತ ಕಟ್ಟಡವನ್ನು ತೆರವುಗೊಳಿಸಬೇಕೆಂದು 4 ಮಂದಿ ಪ್ರತಿವಾದಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ ಬಗ್ಗೆಯೂ 15 ದಿನಗಳಲ್ಲಿ ಸತ್ಯ ಶೋಧನೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.

Leave a Comment

Your email address will not be published. Required fields are marked *