Ad Widget .

ಕಡಬ: ಪಾಲುದಾರಿಕೆಯಲ್ಲಿ ಲಕ್ಷಾಂತರ ರೂ. ಲೂಟಿ ಪರಾರಿ| ಮನೆಯಿಂದ 10 ವರ್ಷದ ಹಿಂದೆಯೇ ನಾಪತ್ತೆ!!

ಕಡಬ: ಹೊಟೇಲೊಂದರಲ್ಲಿ ಕೆಲಸದಲ್ಲಿದ್ದ ವ್ಯಕ್ತಿಯೋರ್ವ ಪಾಲುದಾರಿಕೆಯ ಹೆಸರಿನಲ್ಲಿ ಸ್ಥಳೀಯ ಜನರೊಂದಿಗೆ ಸ್ನೇಹ ಸಂಪಾದಿಸಿ ನಂತರ ಲಕ್ಷಾಂತರ ರೂ. ಹಣವನ್ನು ಹಾಗೂ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ಈತ ಮನೆ ಬಿಟ್ಟು 10 ವರ್ಷವಾಗಿದ್ದರೂ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿರುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

Ad Widget . Ad Widget .

ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿಯ ರಾಮಮಂದಿರ ಸಮೀಪದ ನಿವಾಸಿ ಎಂ.ಟಿ. ಕರೀಗೌಡ ಎಂಬವರ ಪುತ್ರ ಶರತ್ ಬಾಬು ಸಿ.ಕೆ. ಪರಾರಿಯಾಗಿರುವ ವ್ಯಕ್ತಿ. ಈತ ಕಡಬದಲ್ಲಿ ನೂತನವಾಗಿ ಆರಂಭವಾದ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸಗಾರನಾಗಿ ಸೇರಿಕೊಂಡು ಮಾಲಕರ ಸ್ನೇಹ ಸಂಪಾದಿಸಿ ಮ್ಯಾನೇಜ್‍ಮೆಂಟ್‍ವರೆಗೂ ಮಾಡಿಕೊಂಡಿದ್ದ.

Ad Widget . Ad Widget .

ಈ ನಡುವೆ ಸ್ಥಳೀಯವಾಗಿ ಉನ್ನತ ಸ್ಥಾನದಲ್ಲಿ ಇರುವ ಹಲವಾರು ಜನರನ್ನು ತನ್ನ ಮಾತಿನ ಮೋಡಿ ಮೂಲಕ ವಂಚಿಸಿ ಹಣ, ಚಿನ್ನಾಭರಣಗಳು, ವಾಹನ, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಹತ್ತು ಲಕ್ಷಕ್ಕೂ ಮಿಕ್ಕಿದ ವಸ್ತುಗಳೊಂದಿಗೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.
ವಂಚನೆಗೊಳಗಾದವರು ಈತನ ಮೂಲ ಹುಡುಕಿದಾಗ ಆತ ಮನೆ ಬಿಟ್ಟು 10 ವರ್ಷಗಳೇ ಕಳೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಕಡಬ ಪೊಲೀಸ್ ಠಾಣೆಯಲ್ಲಿ ದಾರು ದಾಖಲಾಗಿದೆ.

Leave a Comment

Your email address will not be published. Required fields are marked *