ಉಡುಪಿ: ಇಲ್ಲಿನ ಬಿ.ಆರ್ ಶೆಟ್ಟಿ ನಿರ್ವಹಣೆ ಮಾಡುತ್ತಿರುವ ಆಸ್ಪತ್ರೆಯ ಸಿಬ್ಬಂದಿಯ ಮುಷ್ಕರ ಮುಗಿಯದ ಕಥೆಯಾಗಿದ್ದು, ಸಾರ್ವಜನಿಕರು, ಆಸ್ಪತ್ರೆಗೆ ಆಗಮಿಸುತ್ತಿರು ರೋಗಿಗಳಿಗೆ ಸಂಕಷ್ಟ ಎದುರಾಗಿದೆ.
ವೇತನ ನೀಡುವಂತೆ ಆಗ್ರಹಿಸಿ ಇತ್ತೀಚೆಗೆ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ 16 ಸಿಬ್ಬಂದಿಯನ್ನು ಬಿ.ಆರ್ ಶೆಟ್ಟಿ ಆಸ್ಪತ್ರೆಯ ಆಡಳಿತ ಮಂಡಳಿ ಕೆಲಸದಿಂದಲೇ ತೆಗೆದು ಹಾಕಿದೆ. ಹೀಗಾಗಿ ಕೆಲಸದಿಂದ ತೆಗೆದುಹಾಕಲು ಕಾರಣ ತಿಳಿಸಲು ಪಟ್ಟು ಹಿಡಿದು ಬಿ.ಆರ್.ಶೆಟ್ಟಿ ಆಸ್ಪತ್ರೆಯ ಮುಂದೆ ಸಿಬ್ಬಂದಿ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೆಲಸ ಕಳೆದುಕೊಂಡವರ ಬೆಂಬಲಕ್ಕೆ ಇತರ ಸಿಬ್ಬಂದಿ ಸಾಥ್ ನೀಡಿದ್ದು ಆಸ್ಪತ್ರೆಯ ಮೇಲಧಿಕಾರಿಗಳಿಗೆ ಮುತ್ತಿಗೆ ಹಾಕಿ ಉತ್ತರ ನೀಡಿ ಎಂದು ಆಗ್ರಹಿಸಿದ್ದಾರೆ. ಉಡುಪಿ ನಗರ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಶಾಸಕ ರಘುಪತಿ ಭಟ್ ಆಸ್ಪತ್ರೆ ಸಿಬ್ಬಂದಿಯನ್ನು ಮಾತುಕತೆಗೆ ಕರೆದಿದ್ದಾರೆ. ಆದ್ರೆ ಪಟ್ಟು ಬಿಡದೆ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ಮುಂದುವರಿಸಿದ್ದಾರೆ.
ಇನ್ನೂ ವೇತನ ನೀಡದ ಸಮಸ್ಯೆಗಳು ಕೆಲವು ಆಸ್ಪತ್ರೆಗಳಲ್ಲಿರು ಸಿಬ್ಬಂದಿಯಿಂದ ಕೇಳಿ ಬರುತ್ತಿದ್ದು, ಮತ್ತು ವೇತನ ಕೇಳಿದಾಗ ಇಂದು ನಾಳೆ ಕೊಡುವುದಾಗಿ ಹೇಳುತ್ತಿರುವ ದೂರು ಕೂಡ ಕೇಳಿ ಬುರುತ್ತಿದೆ.