Ad Widget .

ಮಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಕಾಲೇಜುಗಳಿಗೆ ನೊಟೀಸ್ -627 ವಿದ್ಯಾರ್ಥಿಗಳಿಗೆ ಸೋಂಕು

Ad Widget . Ad Widget .

ಮಂಗಳೂರು: ದ. ಕ. ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಮಾರ್ಗಸೂಚಿ ಉಲ್ಲಂಘಿಸಿದ ಕಾಲೇಜುಗಳನ್ನು ಪತ್ತೆಹಚ್ಚಿ ನೋಟಿಸ್ ನೀಡಲು ಮುಂದಾಗಿದೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯ 29 ಕಾಲೇಜುಗಳ 627 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.ಈ ಪೈಕಿ 327 ಮಂದಿ ಕೇರಳ ಭಾಗದವರಾಗಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ , ಸೇರಿದಂತೆ ಹೊರಜಿಲ್ಲೆ ರಾಜ್ಯದ ವಿದ್ಯಾರ್ಥಿಗಳು ಸೇರಿದ್ದಾರೆ. ಜಿಲ್ಲೆಯ ಕಾಲೇಜುಗಳಲ್ಲಿ ಹಾಸ್ಟೆಲ್ ಗಳಲ್ಲಿ ಕೊರೋನಾ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಆರೋಗ್ಯ ಇಲಾಖೆ ಈಗಾಗಲೇ ಸೂಚನೆ ನೀಡಿದ್ದು ಇದೀಗ ಪಾಲನೆ ಮಾಡಿದ ಕಾಲೇಜುಗಳಿಗೆ ಎಚ್ಚರಿಕೆ ನೀಡಿ ನೋಟಿಸ್ ನೀಡಲು ನಿರ್ಧರಿಸಿದೆ.

ಸುಳ್ಯದ ಖಾಸಗಿ ಕಾಲೇಜೊಂದರಲ್ಲಿ ಕಳೆದ ಮೂರು ವಾರಗಳಲ್ಲಿ 77 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಬಾಧಿಸಿದೆ. ಕೇರಳ ಸೇರಿದಂತೆ ಹೊರ ರಾಜ್ಯದ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಲ್ಲಿ ಕೊರೋನಾ ಪ್ರಕರಣ ಕಾಣಿಸಿಕೊಳ್ಳುತ್ತಿದ್ದು ಅವರ ಪ್ರಾಥಮಿಕ ಸಂಪರ್ಕ ಮತ್ತು ದ್ವಿತೀಯ ಸಂಪರ್ಕವನ್ನು ತಪಾಸಣೆ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಕಾಲೇಜುಗಳಿದ್ದು ಹೊರಜಿಲ್ಲೆಯ ರಾಜ್ಯಗಳಿಂದ ಹೆಚ್ಚಿನ ಮಂದಿ ವಿದ್ಯಾರ್ಜನೆಗೆ ಆಗಮಿಸುತ್ತಾರೆ. ಹೀಗೆ ಬರುವಾಗ 72 ಗಂಟೆಗಳ ಆರ್ ಟಿ ಪಿಸಿಆರ್ ನೆಗೆಟಿವ್ ವರದಿ ತರುತ್ತಿದ್ದರೂ ಕೂಡಾ ಇಲ್ಲಿ ಕ್ವಾರಂಟೈನ್ ಆದ ಬಳಿಕ ಅವರಲ್ಲಿ ಕೊವೀಡ್ ಕಾಣಿಸಿಕೊಳ್ಳುತ್ತಿದೆ.

Leave a Comment

Your email address will not be published. Required fields are marked *