Ad Widget .

ಅತ್ಯಾಚಾರದಿಂದ ಎಫ್ ಐಆರ್ ವರೆಗೆ….| ಸಾಂಸ್ಕೃತಿಕ ನಗರಿಯ ಮಾನ ಹರಾಜು ಹಾಕಿದ ದುರ್ಘಟನೆಯ ಕಂಪ್ಲೀಟ್ ರಿಪೋರ್ಟ್|

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು ಮೈಸೂರನ್ನು ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಕುಳಿತಿದ್ದ ವಿದ್ಯಾರ್ಥಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಪುಂಡರ ಗುಂಪು ವಿದ್ಯಾರ್ಥಿನಿಯನ್ನು ಹರಿದು ಮುಕ್ಕಿದ್ದಾರೆ.

Ad Widget . Ad Widget .

ಸ್ನೇಹಿತನ ಜೊತೆಗೆ ಕುಳಿತಿದ್ದ ವಿದ್ಯಾರ್ಥಿನಿಯನ್ನು ಎಣ್ಣೆ ಪಾರ್ಟಿ ಮಾಡುತ್ತಿದ್ದ ಕಾಮುಕರ ಗ್ಯಾಂಗ್ ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ. ಇಡೀ ಘಟನೆಯಿಂದ ಸಾಂಸ್ಕೃತಿಕ ನಗರಿಯ ಮರ್ಯಾದೆ ಹರಾಜಾಗಿದೆ. ನಿನ್ನೆ ಸಂಜೆ ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಈ ಘಟನೆ ನಡೆದಿದೆ. ನಿನ್ನೆ ವಿದ್ಯಾರ್ಥಿನಿ ಹಾಗೂ ಆತನ ಸ್ನೇಹಿತ ಇಬ್ಬರು ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಲೇಔಟ್ ಗೆ ಬಂದಿದ್ದಾರೆ. ಇಬ್ಬರು ಕುಳಿತು ಮಾತನಾಡುತ್ತಿದ್ದ ವೇಳೆ ಈ ಭಾಗದಲ್ಲಿ ಕುಳಿತು ಎಣ್ಣೆ ಪಾರ್ಟಿ ಮಾಡುತ್ತಾ ಕುಳಿತಿದ್ದ ಐವರ ಗ್ಯಾಂಗ್ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಎಸಗಿದೆ.

Ad Widget . Ad Widget .

ವಿದ್ಯಾರ್ಥಿನಿಯ ಸ್ನೇಹಿತನಿಗೆ ಥಳಿಸಿದ ಕಾಮುಕರು

ಈ ವೇಳೆ ವಿರೋಧ ವ್ಯಕ್ತಪಡಿಸಿದ್ದ ವಿದ್ಯಾರ್ಥಿನಿಯ ಸ್ನೇಹಿತನಿಗೆ ಕಾಮುಕರು ಹಲ್ಲೆ ಮಾಡಿದ್ದಾರೆ. ಮೊದಲು ಕಪಾಳಕ್ಕೆ ಹೊಡೆದು ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಸ್ನೇಹಿತ ಕುಸಿದು ಬಿದ್ದ ಬಳಿಕ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಐದು ಮಂದಿ ಬಲಾತ್ಕಾರ ಮಾಡಿದ್ದಾರೆ. ನಿರ್ಜನ ಪ್ರದೇಶದಲ್ಲಿ ನಡೆದ ಘಟನೆಯನ್ನು ವಿದ್ಯಾರ್ಥಿನಿ‌ ಸ್ನೇಹಿತ ಪೊಲೀಸರಿಗೆ ಮುಟ್ಟಿಸಿದ್ದಾನೆ. ಬಳಿಕ ಅಸ್ವಸ್ಥಳಾಗಿದ್ದ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಾಯಗೊಂಡ ಸಂತ್ರಸ್ತೆ ಹಾಗೂ ಸ್ನೇಹಿತನ ಹೇಳಿಕೆಯನ್ನ ದಾಖಲು ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಸ್ಥಳಕ್ಕೆ ಬಂದ ದೇವರಾಜ ವಿಭಾಗದ ಎಸಿಪಿ ಶಶಿಧರ್ ಹಾಗೂ ಆಲನಹಳ್ಳಿ ಠಾಣಾ ಇನ್ಸ್‌ಪೆಕ್ಟರ್ ರವಿಶಂಕರ್ ಸಿಬ್ಬಂದಿಯೊಂದಿಗೆ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಬಂದ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಘಟನೆಯನ್ನ ಖಂಡಿಸಿದ್ದಾರೆ. ಘಟನೆಯನ್ನ ಗಂಭೀರವಾಗಿ ಪರಿಗಣಿಸಿ ಪೊಲೀಸರು ಕೂಡಲೇ ಸುಮೋಟೋ ಕೇಸ್ ದಾಖಲು ಮಾಡಿ, ಆರೋಪಿಗಳನ್ನ ಕೂಡಲೇ ವಶಕ್ಕೆ ಪಡೆಯಬೇಕು. ಸಂತ್ರಸ್ತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು ಅಂತಾ ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಉಸ್ತುವಾರಿ ಸಚಿವರು ವಿಷಾದ

ಇನ್ನು ಗ್ಯಾಂಗ್ ರೇಪ್ ಪ್ರಕರಣದ ತನಿಖೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ‌ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದ್ದು, ಅತಿ ಶೀಘ್ರದಲ್ಲಿ ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯುವತಿಯ ಜೊತೆ ಇದ್ದ ಯುವಕನ ಮಾಹಿತಿ ಆಧರಿಸಿ ಪೊಲೀಸರು ಎಫ್.ಐ.ಆರ್ ದಾಖಲು ಮಾಡಿಕೊಂಡಿದ್ದಾರೆ.

ಘಟನೆಯ ಎಲ್ಲಾ‌ ವಿವರಗಳನ್ನು ಮುಖ್ಯಮಂತ್ರಿ ಹಾಗೂ ಗೃಹಸಚಿವರಿಗೆ ಹೇಳಿದ್ದೇನೆ. ಇನ್ನು ಮಾಧ್ಯಮದ ಮುಂದೆ ಎಲ್ಲವನ್ನು ಹೇಳಲು ಸಾಧ್ಯವಿಲ್ಲ. ಯುವತಿ ಆಸ್ಪತ್ರೆಯಲ್ಲಿ ಇದ್ದಾಳೆ. ಆಕೆ ಆರೋಗ್ಯವಾಗಿದ್ದಾಳೆ. ಮೈಸೂರಿಗೆ ಕಪ್ಪು ಚುಕ್ಕೆ ತರುವಂತಹ ಘಟನೆ ಮತ್ತೆ ನಡೆಯದಂತೆ ತಡೆಯಲು ಸೂಕ್ತ ಭದ್ರತೆ ವ್ಯವಸ್ಥೆ ಮಾಡುತ್ತೇವೆ ಅಂತ ಮೈಸೂರಿನಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಇನ್ನು ಪ್ರಕರಣವನ್ನ ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲೈಂಗಿಕ ಕಿರುಕುಳ ಆರೋಪದ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಆರೋಪಿಗಳನ್ನ ಶೀಘ್ರದಲ್ಲೇ ಬಂಧಿಸುತ್ತೇವೆ. ಘಟನೆ ಬಗ್ಗೆ ಕೆಲ ಮಾಹಿತಿಯನ್ನ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಘಟನೆ ನಡೆದಿದೆ, ತನಿಖೆಯನ್ನ ಆರಂಭಿಸಿದ್ದೇವೆ. ಹಾಗೂ ಯುವತಿ ಜೊತೆಗಿದ್ದ ಯುವಕನಿಂದಲೂ ಮಾಹಿತಿ ಪಡೆದಿದ್ದೇವೆ. ಸೂಕ್ಷ್ಮ ವಿಚಾರವಾದ ಕಾರಣ ಎಲ್ಲವನ್ನೂ ಬಹಿರಂಗಪಡಿಸಲು ಅಸಾಧ್ಯ ಅಂತ ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ಇನ್ನೂ, ಘಟನೆ ಸಂಬಂಧ ನಾಪತ್ತೆಯಾಗಿರೋ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಇದರ ನಡುವೆ ವಿದ್ಯಾರಣ್ಯ ಪುರಂ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣ ಮಾಸುವ ಮುನ್ನವೇ ಗ್ಯಾಂಗ್ ರೇಪ್ ನಡೆದಿದ್ದು ಕಾನೂನು ಸುವ್ಯವಸ್ಥೆ ಮೇಲೆ ಪ್ರಶ್ನೆ ಮಾಡುವಂತಾಗಿದೆ.

 ಈ ನಡುವೆ ಮೈಸೂರು ನಗರದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣದ ತನಿಖೆಯ ಮೇಲುಸ್ತುವಾರಿಗೆ ಹಿರಿಯ ಪೊಲೀಸ್‌ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪ್ರಕರಣದ ಕುರಿತು ಮೈಸೂರು ನಗರ ಪೊಲೀಸ್‌ ಕಮಿಷನರ್‌ ಅವರಿಂದ ಮಾಹಿತಿ ಪಡೆದ ಬಳಿಕ ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್‌ ದಾಖಲು ಮಾಡಲಾಗಿದೆ. ತಕ್ಷಣ ಮೈಸೂರಿಗೆ ತೆರಳಿ ತನಿಖೆಯ ನೇತೃತ್ವ ವಹಿಸಿಕೊಳ್ಳುವಂತೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಪ್ರತಾಪ್‌ ರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ’ ಎಂದರು.

Leave a Comment

Your email address will not be published. Required fields are marked *