ಬೆಳಗಾವಿ : ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಇನ್ನೂ ಮಾಸುವ ಮುನ್ನವೇ, ಹೊಲಕ್ಕೆ ತೆರಳುತ್ತಿದ್ದಂತ ಬಾಲಕಿಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರೋ ಪ್ರಕರಣ, ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯೊಬ್ಬಳು ಹೊಲಕ್ಕೆ ತೆರಳುತ್ತಿದ್ದಂತ ಸಂದರ್ಭದಲ್ಲಿ, ನಾಲ್ವರು ಕಾಮುಖರು, ಬಾಲಕಿಯನ್ನು ಅಡ್ಡಗಟ್ಟಿ, ಸಾಮೂಹಿಕ ಅತ್ಯಾಚಾರ ನಡೆಸಿರೋದು ತಿಳಿದು ಬಂದಿದೆ.
ಕಳೆದ 20 ದಿನಗಳ ಹಿಂದೆ ನಡೆದಿರೋ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಬಾಲಕಿಯ ಪೋಷಕರು ಘಟಪ್ರಭಾ ಪೊಲೀಸ್ ಠಾಣೆಗೆ ಈ ಸಂಬಂದ ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡಿರುವಂತ ಪೊಲೀಸರು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ ಬಲೆ ಬೀಸಿದ್ದಾರೆ.