Ad Widget .

ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು: ಕೋವಿಡ್ ಹಿನ್ನಲೆ ಸೆ.5ರಂದು ನಡೆವುವ ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷಾ ದೃಷ್ಠಿಯಿಂದ ಸರ್ಕಾರವು ಈ ಸಾಲಿನ ಶಿಕ್ಷಕರ ದಿನಾಚರಣೆಯನ್ನು ಈ ಕೆಳಕಂಡ ಮಾರ್ಗಸೂಚಿಯಂತೆ ಸರಳವಾಗಿ ಮತ್ತು ಸುರಕ್ಷಿತವಾಗಿ ಆಚರಿಸಲು ಸೂಚಿಸಿದೆ.

Ad Widget . Ad Widget . Ad Widget .

1.ಜಿಲ್ಲಾ ಮಟ್ಟದ ವೇದಿಕೆಯ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸತ್ ಸದಸ್ಯರು, ವಿಧಾನಸಭಾ, ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ, ಜಿಲ್ಲಾ ಉಪನಿರ್ದೇಶಕರು ಇವರು ಮಾತ್ರ ಆಸೀನರಾಗಿರುವಂತೆ ವೇದಿಕೆ ಸಜ್ಜುಗೊಳಿಸುವುದು

2.ತಾಲೂಕು ಮಟ್ಟದ ವೇದಿಕೆ ಮೇಲೆ ಸ್ಥಳೀಯ ವಿಧಾನಸಭಾ, ಪರಿಷತ್ತಿನ ಸದಸ್ಯರು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರು, ತಾಲೂಕು ಪಂಚಾಯ್ತಿ ಸಿಇಓ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಮಟ್ಟದ ವೇದಿಕೆಯಲ್ಲಿ ಶಾಲಾ ಮುಖ್ಯಸ್ಥರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು ಮತ್ತು ಎಲ್ಲಾ ಶಿಕ್ಷಕರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸುವ ಮೂಲಕ ಗೌರವ ಸೂಚಿಸುವುದು.

3.ವೇದಿಕೆಯ ಮುಂಭಾಗ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಸನ ವ್ಯವಸ್ಥೆ ಕಲ್ಪಿಸಬೇಕು.

4.ಆಹ್ವಾನ ಪತ್ರಿಕೆಯನ್ನು 50 ಮಂದಿಗೆ ಮೀರದಂತೆ ಮುದ್ರಿಸುವುದು.

5.ರಾಜ್ಯ, ಜಿಲ್ಲಾ, ತಾಲೂಕು ಮತ್ತು ಶಾಲಾ ಮಟ್ಟದಲ್ಲಿ ದಿನಾಂಕ 05-09-2021ರಂದೇ ಶಿಕ್ಷಕರ ದಿನಾಚರಣೆಯನ್ನು ಆಚರಿಸುವುದು. ಸಮಾರಂಭದ ಎಲ್ಲಾ ಹಂತಗಳಲ್ಲಿಯೂ ಸುರಕ್ಷತೆಯನ್ನು, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸುವುದು.

6.ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು. ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬೇಕು
ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರೂ ಪ್ರವೇಶದ್ವಾರದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್ ಗೆ ಒಳಗಾಗುವುದು. ಕೈಗಳಿಗೆ ಸ್ಯಾನಿಟೈಸರ್ ಮಾಡಿಸಿಕೊಳ್ಳುವುದು. ಮುಖಗವಸುಗಳನ್ನು ಕಡ್ಡಾಯವಾಗಿ ಧರಿಸುವುದು.

7.ಸುರಕ್ಷಿತ ವಿಧಾನದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುವುದನ್ನು ಹೊರತುಪಡಿಸಿ, ಊಟ, ಲಘು ಉಪಹಾರ ಇತ್ಯಾದಿಗಳ ವ್ಯವಸ್ಥೆಯನ್ನು ಮಾಡಬಾರದು
ಈ ಮೇಲಿನ ಮಾರ್ಗಸೂಚಿಗಳನ್ನು ಅನುಸರಿಸಿ, ಶಿಕ್ಷಕರ ದಿನಾಚರಣೆಯನ್ನು ಆಚರಿಸುವುದು. ಇದರ ಹೊರತುಪಡಿಸಿ ಉಳಿದ ಯಾವುದೇ ಚಟುವಟಿಕೆಗಳನ್ನು ಆಯೋಜಿಸುವಂತಿಲ್ಲ. ಯಾವ ಹಂತಗಳಲ್ಲಿಯೂ ಸಹ ಮಕ್ಕಳು\ವಿದ್ಯಾರ್ಥಿಗಳು ಭಾಗವಹಿಸುವಂತಿಲ್ಲ ಎಂದು ಮಾಹಿತಿ ನೀಡಲಾಗಿದೆ.

Leave a Comment

Your email address will not be published. Required fields are marked *