ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‍ಗೆ ಸಂಬಂಧಿತ ವಾರಾಂತ್ಯ ಕರ್ಪ್ಯೂ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ
ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು, ಹಣ್ಣು – ತರಕಾರಿಗಳು, ಮೀನು, ಮಾಂಸ ಮತ್ತು ಬೀದಿ ವ್ಯಾಪಾರಿಗಳ ಅಂಗಡಿಗಳು ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮದ್ಯದ ಅಂಗಡಿಗಳು ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸೆಲ್‍ಗಳನ್ನು ನೀಡಬಹುದು. ಹೋಟೆಲ್‍ಗಳು ಪಾರ್ಸೆಲ್‍ಗಳನ್ನು ಮಾತ್ರ ನೀಡಬಹುದು. ದಿನದ 24 ಗಂಟೆಗಳಲ್ಲಿ ಆಹಾರ ಪದಾರ್ಥಗಳ ಹೋಂ ಡೆಲಿವರಿ ಕೈಗೊಳ್ಳಬಹುದು. ಬಸ್ಸುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಮಧ್ಯಾಹ್ನದವರೆಗೆ ಅವಕಾಶ ನೀಡಲಾಗಿದೆ.
ಜಿಲ್ಲೆಯಲ್ಲಿ ವಾರಾಂತ್ಯ ಕರ್ಪ್ಯೂ ಜಾರಿಯಲ್ಲಿರುವುದರಿಂದ, ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳು ಮತ್ತು ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಆ.28 ರಂದು ತಮ್ಮ ಮನೆಗಳಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.