Ad Widget .

ಮಾನಸಗಂಗೋತ್ರಿ ತಿರುಗಾಟ‌ ನಿಷೇಧ ಸುತ್ತೋಲೆ ವಾಪಸ್ ಪಡೆದ‌ ಮೈಸೂರು ವಿವಿ

Ad Widget . Ad Widget .

ಮೈಸೂರು: ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ತಿರುಗಾಟಕ್ಕೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಸುತ್ತೋಲೆಯನ್ನು ಮೈಸೂರು ವಿಶ್ವವಿದ್ಯಾಲಯ ಶನಿವಾರ ವಾಪಸ್‌ ಪಡೆದಿದೆ.

Ad Widget . Ad Widget .

ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಆ.26ರಂದು ಕುಲಸಚಿವ ಪ್ರೊ.ಆರ್‌.ಶಿವಪ್ಪ ಅವರು ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಿದ್ದರು.

‘ಕ್ಯಾಂಪಸ್‌ನಲ್ಲಿ ಸಂಜೆ 6.30ರ ನಂತರ ಹೆಣ್ಣು ಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು ಹಾಗೂ ಕೂರುವುದನ್ನು ನಿಷೇಧಿಸಲಾಗಿದೆ. ಪೊಲೀಸ್‌ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ’ ಎಂದು ಉಲ್ಲೇಖಿಸಿದ್ದರು.

ಈ ನಿಲುವಿಗೆ ಭಾರಿ ವಿರೋಧ ವ್ಯಕ್ತವಾದ ಬೆನ್ನಲೇ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಸೂಚನೆ ಮೇರೆಗೆ ಆದೇಶ ಹಿಂಪಡೆದಿದ್ದಾರೆ.

‘ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ ನಂತರ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು. ನಿತ್ಯ ಸಂಜೆ 6ರಿಂದ 9ರವರೆಗೆ ಗಸ್ತು ತಿರುಗಲು ಭದ್ರತಾ ಸಿಬ್ಬಂದಿ ನಿಯೋಜಿಸಲಾಗುವುದು. ಸಂಜೆ 6.30ರ ನಂತರ ಸುರಕ್ಷತಾ ದೃಷ್ಟಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಕುಕ್ಕರಹಳ್ಳಿ ಕೆರೆ ಆವರಣ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ಕುಲಸಚಿವರು ಹೊಸ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *