ಚಲಿಸುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ‌ ಉರಿದ ಕಾರು

Ad Widget ... ..

ಬೆಂಗಳೂರು: ಚಲಿಸುತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಣಚಿನಕುಪ್ಪೆ ಬಳಿ ನಡೆದಿದೆ.

Ad Widget

ರಸ್ತೆ ಮಧ್ಯೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರನ್ನು ರಸ್ತೆ ಪಕ್ಕ ತಂದು ನಿಲ್ಲಿಸಲಾಗಿದೆ.

ಕ್ಷಣಾರ್ಧದಲ್ಲಿ ಏಕಾಏಕಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.

ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Comment

Your email address will not be published. Required fields are marked *