ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹೊರಡಿಸಿರುವ ಆದೇಶ, ಇದೀಗ ವಿವಾದಕ್ಕೆ ಕಾರಣವಾಗಿದೆ. ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಇನ್ನುಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಮಾತ್ರ ಅವಕಾಶ ಎಂದು ಆದೇಶದ ಫ್ಲೆಕ್ಸ್ ಹಾಕಲಾಗಿದ್ದು, ಈ ಆದೇಶ ವಿವಾದದ ಕಿಡಿ ಹಬ್ಬಿಸುವ ಲಕ್ಷಣಗಳು ಕಂಡುಬರುತ್ತಿದೆ.
ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ಪ್ರಕಟಣೆ ಹೊರಡಿಸಿದ್ದು, ದೇವಾಲಯ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂಧೂ ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ಹಿಂದೂ ಭಕ್ತಾಧಿಗಳ ಹೊರತಾಗಿ ಇತರರು ವಾಹನ ಪಾರ್ಕಿಂಗ್ ಮಾಡಿ ಹೋಗುವಂತಿಲ್ಲ. ಇದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಪಾರ್ಕಿಂಗ್ ಮಾಡಿ ಹೋದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದೆ.
ಈ ಆದೇಶದ ಕುರಿತಂತೆ ಜಾಲತಾಣಗಳಲ್ಲಿ ಪರ ವಿರೋಧಗಳ ಚರ್ಚೆ ನಡೆಯುತ್ತಿದ್ದು, ದೇವಸ್ಥಾನದ ಸಮಿತಿಯವರು ಮುಂದೇನು ಮಾಡುತ್ತಾರೆ ಎಂದು ಕಾದುನೋಡಬೇಕಿದೆ.