ಟೋಕಿಯೊ: ಜಪಾನ್‌ನ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಭಾರತದ ವಿನೋದ್ ಕುಮಾರ್ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಭಾರತಕ್ಕೆ ಭಾನುವಾರ ಒಟ್ಟು ಮೂರು ಪದಕಗಳು ಬಂದಂತಾಗಿದೆ.
19.91 ಮೀಟರ್ ದೂರ ಎಸೆದು ಪದಕ್ಕೆ ಕೊರಳೊಡ್ಡಿದ್ದೂ ಮಾತ್ರವಲ್ಲದೆ ಏಷಿಯನ್ ದಾಖಲೆಯನ್ನೂ ನಿರ್ಮಿಸಿದರು. ಪೋಲೆಂಡ್‌ನ ಪಿಯೋಟರ್ ಕೊಸೆವಿಕ್ಜ್ (20.02ಮೀ), ಕ್ರೊವೇಷಿಯಾದ ವೆಲಿಮಿರ್ ಸ್ಯಾಂಡೊರ್ (19.98ಮೀ) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ ಬಾಚಿಕೊಂಡರು.






