Ad Widget .

ಅಪ್ರಾಪ್ತ ಬಾಲಕರಿಂದ ಅಪ್ರಾಪ್ತೆ ಬಾಲಕಿಯ ಸಾಮೂಹಿಕ ಅತ್ಯಾಚಾರ| ವಿಕೃತರಾಗ್ತಿದಾರಾ ನವಪೀಳಿಗೆ…?

Ad Widget . Ad Widget .

ಜಾರ್ಖಂಡ್‌: ರಾಜಧಾನಿ ರಾಂಚಿ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಏಳು ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಎಲ್ಲಾ ಆರೋಪಿಗಳೂ ಸಹ ಅಪ್ರಾಪ್ತ ಬಾಲಕರೇ ಆಗಿದ್ದು, ಪರಿಚಯಸ್ಥ ಹುಡುಗರಿಂದಲೇ ಇಂತಹ ಹೀನ ಕೃತ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ
ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರರನ್ನು ಬಂಧಿಸಲು ಶೋಧಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ಪರಿಚಯದವನಾದ ಒಬ್ಬ ಆರೋಪಿ ತನ್ನ ಬೈಕಿನಲ್ಲಿ ಬಾಲಕಿಯನ್ನು ಸುತ್ತಾಡಿಸುವ ನೆಪದಲ್ಲಿ ಕರೆದುಕೊಂಡು ಹೋಗಿದ್ದಾನೆ. ಆತನ ಇನ್ನು6 ಮಂದಿ ಸ್ನೇಹಿತರು ಕಾಯುತ್ತಿದ್ದ ಮಂದಾರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾನೆ. ಅಲ್ಲೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ.

Ad Widget . Ad Widget .

7 ಜನ ಬಾಲಕರನ್ನು ನೋಡುತ್ತಿದ್ದಂತೆ ಆಕೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಆದರೆ, ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಬಳಿಕ ಎಲ್ಲಾ ಆರೋಪಿಗಳೂ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಠಾಣಾ ಉಸ್ತುವಾರಿ ಅಧಿಕಾರಿ ರಾಣಾ ಸಿಂಗ್ ಹೇಳಿದ್ದಾರೆ. ಘಟನೆಯ ನಂತರ ಬಾಲಕಿಯನ್ನು ಕಡೆದುಕೊಂಡು ಹೋಗಿದ್ದ ಬಾಲಕನೇ ಮತ್ತೆ ಆಕೆಯನ್ನು ಮನೆಗೆ ತಂದು ಬಿಟ್ಟಿದ್ದಾನೆ. ಬಳಿಕ ಬಾಲಕಿ ಮನೆಯವರಿಗೆ ಈ ವಿಷಯ ತಿಳಿಸಿದ್ದಾರೆ. ಮನೆಯ ಸದಸ್ಯರು ಅತ್ಯಾಚಾರದ ಬಗ್ಗೆ ದೂರು ದಾಖಲಿಸಿದ್ದಾರೆ.

ಎಲ್ಲಾ ಆರೋಪಿಗಳು ಮಂದಾರ್ ಪ್ರದೇಶದವರಾಗಿದ್ದು, ಅವರಲ್ಲಿ ನಾಲ್ವರನ್ನು ಶನಿವಾರ ಬಂಧಿಸಲಾಗಿದೆ. ಎಲ್ಲರ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಫೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ಬಾಲಾಪರಾಧಿಗಳ ಕಾರಾಗೃಹಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *