August 2021

ಇಸ್ರೋದಿಂದ‌ ಮತ್ತೊಂದು ಮೈಲಿಗಲ್ಲು| ನಭಕ್ಕೆ ಚಿಮ್ಮಿದ ಇಮೇಜಿಂಗ್

ನವದೆಹಲಿ: ಇಸ್ರೋದ ಮತ್ತೊಂದು ಉಪಗ್ರಹ ಇಂದು ಬೆಳಗ್ಗಿನ ಜಾವ 5;43ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಕೇಂದ್ರದಿಂದ ಉಡಾವಣೆಯಾಗಿದೆ. ಕಳೆದ ಫೆಬ್ರವರಿ 28 ರಂದು, ಇಸ್ರೋ 18 ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಅದರಲ್ಲಿ ಪ್ರಾಥಮಿಕ ಬ್ರೆಜಿಲ್‌ನ ಅಮೆಜೋನಿಯಾ-1 ಉಪಗ್ರಹ ಮತ್ತು ಕೆಲವು ದೇಸೀ ಉಪಗ್ರಹಗಳನ್ನು ಹೊಂದಿದ್ದು, ಇಂದು ಇದರ ಉಡಾವಣೆಯಾಗಿದೆ. ಇದು ಪ್ರಕೃತಿ ವಿಕೋಪಗಳು ಮತ್ತು ಮೋಡ ಸ್ಫೋಟಗಳು ಅಥವಾ ಗುಡುಗು ಸಹಿತ ಹವಾಮಾನ ಘಟನೆಗಳನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ. ಜಿಎಸ್‌ಎಲ್‌ವಿ-ಎಫ್ 10 ಮಿಷನ್ ಭೌಗೋಳಿಕ […]

ಇಸ್ರೋದಿಂದ‌ ಮತ್ತೊಂದು ಮೈಲಿಗಲ್ಲು| ನಭಕ್ಕೆ ಚಿಮ್ಮಿದ ಇಮೇಜಿಂಗ್ Read More »

ಬಂಟ್ವಾಳ: ಡೀಸೆಲ್ ಕಳವು ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲಕ್ಷಾಂತರ ಮೌಲ್ಯದ ಡೀಸೆಲ್ ಕಳವು ಪ್ರಕರನಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಐವನ್ ಚಾರ್ಲೋ ಪಿಂಟೋ ಎಂದು ಗುರುತಿಸಲಾಗಿದೆ. ಕೆಲ ದಿಗಳ ಹಿಂದೆ ಅರಳ ಗ್ರಾಮದಲ್ಲಿ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್ ಲೈನ್ ಕೊರೆದು ಪೈಪ್ ಅಳವಡಿಸಿ ಲಕ್ಷಾಂತರ ಮೌಲ್ಯದ ಡೀಸೆಲ್ ಕಳ್ಳತನ ನಡೆದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣದ ಹಿಂದೆ ಜಾಡು ಹಿಡಿದು

ಬಂಟ್ವಾಳ: ಡೀಸೆಲ್ ಕಳವು ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್ Read More »

ವೀಕೆಂಡ್ ಕರ್ಪ್ಯೂ ಹಿನ್ನೆಲೆ| ಮಂಗಳೂರು ವಿ.ವಿ ವಾರಾಂತ್ಯ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲಾಡಳಿತ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ಆ.14ರ ಶನಿವಾರ ಹಾಗೂ ಆ.28ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಉಳಿದಂತೆ ಯಾವುದೇ ಪರೀಕ್ಷೆಗಳಲ್ಲಿ ಬದಲಾವಣೆ ಇರುವುದಿಲ್ಲ. ಈ ಹಿಂದೆ ನಿಗದಿಪಡಿಸಿದ ವೇಳಾಪಟ್ಟಿಯಂತೆ ಬಾಕಿ ಉಳಿದ ಪರೀಕ್ಷೆಗಳು ನಡೆಯಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ. ವಾರಾಂತ್ಯದ ಪರೀಕ್ಷೆಗಳನ್ನು ಮಾತ್ರ ಬದಲಾವಣೆ ಮಾಡಿರುವುದಾಗಿ ವಿ.ವಿ ಪ್ರಕಟಣೆ ತಿಳಿಸಿದೆ.

ವೀಕೆಂಡ್ ಕರ್ಪ್ಯೂ ಹಿನ್ನೆಲೆ| ಮಂಗಳೂರು ವಿ.ವಿ ವಾರಾಂತ್ಯ ಪರೀಕ್ಷೆಗಳು ಮುಂದೂಡಿಕೆ Read More »

ದ.ಕ ದಲ್ಲಿ ಮುಂದುವರೆದ ಕೊರೊನಾ ಹಾವಳಿ| ಲಾಕ್ ಡೌನ್, ಹಬ್ಬ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?

ಮಂಗಳೂರು: ಕೊರೊನಾ ಸೋಂಕಿನ ಸಂಭಾವ್ಯ 3ನೇ ಅಲೆಯನ್ನು ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಗತ್ಯ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ. ತಿಳಿಸಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‌ ಕ್ಲಬ್‌ನಲ್ಲಿ ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸಂಭಾವ್ಯ ಕೊರೊನಾ 3 ನೇ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಕೊರೊನಾ 3ನೇ ಅಲೆಯು ಮಕ್ಕಳಿಗೆ ಹೆಚ್ಚು ಬಾಧಿಸಲಿದೆ ಎಂಬ

ದ.ಕ ದಲ್ಲಿ ಮುಂದುವರೆದ ಕೊರೊನಾ ಹಾವಳಿ| ಲಾಕ್ ಡೌನ್, ಹಬ್ಬ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು? Read More »

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಸೀದಿಯಲ್ಲಿ ಶ್ರಮದಾನ

ಶನಿವಾರಸಂತೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡ್ಲಿಪೇಟೆ ಸ್ವಸಹಾಯ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೊಡ್ಲಿಪೇಟೆಯ ಜಾಮೀಯಾ ಮಸ್ಜಿದ್‍ನಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಈ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡ್ಲಿಪೇಟೆ ವಲಯ ಮೇಲ್ವೀಚಾರಕ ಭರತ್‍ಕುಮಾರ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನಗೊಂಡಿದ್ದು ರಾಜ್ಯದಲ್ಲಿ ಸ್ವಸಹಾಯ ಸಂಘಗಳ ಮೂಲಕ ಜನಮನ್ನಣೆಗೊಂಡಿದೆ ಎಂದರು. ಕಳೆದ ಮತ್ತು ಪ್ರಸ್ತುತ ವರ್ಷ ಕೋವಿಡ್ ಸಂಧಿಘ್ನ ಪರಿಸ್ಥಿತಿಯಲ್ಲಿ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ಸಮಾಜ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಸೀದಿಯಲ್ಲಿ ಶ್ರಮದಾನ Read More »

ಪುತ್ತೂರು: ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೆಸರಿನಲ್ಲಿ ನಕಲಿ ಪೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನ

ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಕೆ ಬಂದಿದೆ. ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಭಾವಚಿತ್ರವನ್ನು ಪ್ರೊಫೈಲ್ ಹಾಕಿರುವ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಲ್ಲಿ ಹಣದ ಬೇಡಿಕೆ ಇಟ್ಟು ತುರ್ತಾಗಿ ಗೂಗಲ್ ಪೇ ಮಾಡುವಂತೆ ಕೇಳಲಾಗಿದೆ. ಇದೆ ರೀತಿ

ಪುತ್ತೂರು: ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೆಸರಿನಲ್ಲಿ ನಕಲಿ ಪೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನ Read More »

ನಾನು ಹೇಳಿದ್ದು ಹೌದು ತಪ್ಪು ಎಂದು ಕ್ಷಮೆಯಾಚಿಸಿದ ಈಶ್ವರಪ್ಪ

ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಬಳಸಿದಕ್ಕೆ ಸಚಿವ ಈಶ್ವರಪ್ಪ “ನಾನು ಆ ಪದ ಬಳಸಬಾರದಿತ್ತು, ಆದರೆ ಬಳಸಿದ್ದೇಕ್ಕೆ ಕ್ಷಮೆಯನ್ನು ಯಾಚಿಸಿದ್ದೇನೆ” ಎಂದು ಕ್ಷಮೆಯಸಿದ್ದಾರೆ. ಕಾಂಗ್ರೆಸ್‍ನವರ ವಿರುದ್ಧ ಅಶ್ಲೀಲ ಶಬ್ದ ಬಳಸಿದ ವಿಚಾರವಾಗಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾನು ಹೇಳಿದ್ದು ಹೌದು, ಆ ಒಂದು ಪದ ಬಳಸಿದ್ದು ತಪ್ಪು. ಸಿಟ್ಟಿನ ಭರದಲ್ಲಿ ಹೇಳಿ ಆ ಪದವನ್ನು ಹಿಂಪಡೆದುಕೊಂಡಿದ್ದೇನೆ. ಆದರೆ ಸುಲಭ್ ಶೌಚಾಲಯಕ್ಕೆ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಹೇಳಿದನ್ನು ಕಾಂಗ್ರೆಸ್ ಅವರು ಒಪ್ಪುತ್ತಾರಾ? ಕಾಂಗ್ರೆಸ್ ಅವರು

ನಾನು ಹೇಳಿದ್ದು ಹೌದು ತಪ್ಪು ಎಂದು ಕ್ಷಮೆಯಾಚಿಸಿದ ಈಶ್ವರಪ್ಪ Read More »

ಹಿಮಾಚಲ ಪ್ರದೇಶ| ಭಾರೀ ಭೂಕುಸಿತಕ್ಕೆ ಹಲವರ ಬಲಿ ಶಂಕೆ| ಹತ್ತಾರು ವಾಹನಗಳು ಜಖಂ

ಹಿಮಾಚಲ ಪ್ರದೇಶದ ಕಿನ್ನೌರ್​ನಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತದ ಪರಿಣಾಮವಾಗಿ ಸಾಕಷ್ಟು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು ಅನೇಕರು ಸಾವನ್ನಪ್ಪಿರುವ ಸಾಧ್ಯತೆಯಿದೆ. ಭಾರೀ ಭೂಕುಸಿತದ ಬಳಿಕ ವಾಹನಗಳು ಅವಶೇಷಗಳಡಿ ಸಿಲುಕಿದ್ದು ಅಪಾರ ಪ್ರಮಾಣದಲ್ಲಿ ಸಾವು ನೋವು ಉಂಟಾಗಿರುವುದಾಗಿ ಪ್ರಾಥಮಿಕ ‌ಮಾಹಿತಿಯಿಂದ ತಿಳಿದು ಬಂದಿದೆ. ಭೂಕುಸಿತ ಉಂಟಾಗಿರುವ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಆರಂಭವಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿರುವುದಾಗಿ ಮಾಹಿತಿ ಲಭಿಸಿದೆ.

ಹಿಮಾಚಲ ಪ್ರದೇಶ| ಭಾರೀ ಭೂಕುಸಿತಕ್ಕೆ ಹಲವರ ಬಲಿ ಶಂಕೆ| ಹತ್ತಾರು ವಾಹನಗಳು ಜಖಂ Read More »

ತಲೆ ಮೇಲೆ ಕಲ್ಲು ಹಾಕಿ ಯುವಕನ ಕೊಲೆ|

ಹಾಸನ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ಸಮೀಪದಲ್ಲಿ ನಡೆದಿದೆ. ಅರಸೀಕೆರೆ ನಿವಾಸಿ ನವಾಜ್(೨೭) ಕೊಲೆಯಾದ ದುರ್ದೈವಿ. ದುಷ್ಕರ್ಮಿಗಳು ನಿನ್ನೆ ತಡರಾತ್ರಿ ನವಾಜ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊಲೆಯ ಹಿಂದಿನ ಕಾರಣ ಈವರೆಗೂ ತಿಳಿದು ಬಂದಿಲ್ಲ ಎನ್ನಲಾಗಿದೆ.

ತಲೆ ಮೇಲೆ ಕಲ್ಲು ಹಾಕಿ ಯುವಕನ ಕೊಲೆ| Read More »

ಒಬಿಸಿ ಮಸೂದೆಯನ್ನು ಅಂಗೀಕರಿಸಿದ ಲೋಕಸಭೆ|

ನವದೆಹಲಿ : ರಾಜ್ಯಗಳು ತಮ್ಮ ಒಬಿಸಿ (ಇತರೆ ಹಿಂದುಳಿದ ವರ್ಗಗಳ) ಪಟ್ಟಿಯನ್ನ ಮಾಡುವ ಹಕ್ಕನ್ನು ನೀಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನ ಮಂಗಳವಾರ ಲೋಕಸಭೆಯು ಅಂಗೀಕರಿಸಿದೆ. ವಿಶೇಷ ಅಂದ್ರೆ, ಇಡೀ ಸದನವು ಅದರ ಪರವಾಗಿ ಮತ ಚಲಾಯಿಸಿತು. ಲೋಕಸಭೆಯಲ್ಲಿ ಎಲ್ಲ ಸಾಧಕ ಬಾಧಕಗಳನ್ನ ಬೆಂಬಲಿಸಿ ಮತ ಚಲಾಯಿಸಲಾಯ್ತು. ಲೋಕಸಭೆಯಲ್ಲಿ, ಸರ್ಕಾರವು ಸೋಮವಾರ ಇತರ ಹಿಂದುಳಿದ ವರ್ಗಗಳಿಗೆ (OBC) ಸಂಬಂಧಿಸಿದ ‘ಸಂವಿಧಾನ (127 ನೇ ತಿದ್ದುಪಡಿ) ಮಸೂದೆ, 2021’ ಅನ್ನು ಪರಿಚಯಿಸಿತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು

ಒಬಿಸಿ ಮಸೂದೆಯನ್ನು ಅಂಗೀಕರಿಸಿದ ಲೋಕಸಭೆ| Read More »