ಇಡಾ ಚಂಡಮಾರುತವು ಉಂಟು ಮಾಡಿದ ಪ್ರವಾಹ ಪರಿಸ್ಥಿತಿಯಲ್ಲಿ ನ್ಯೂಯಾರ್ಕ್ನಲ್ಲಿ ರಾತ್ರೋರಾತ್ರಿ ಕನಿಷ್ಟ 41 ಮಂದಿಯನ್ನು ಬಲಿ ಪಡೆದಿದೆ.
ಹ್ಯುರಿಕೇನ್ ಇಡಾ ಚಂಡಮಾರುತದ ಬಳಿಕ ನ್ಯೂಯಾರ್ಕ್ನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಯಾರ್ಕ್ನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪರಿಸ್ಥಿತಿ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಿದೆ. ನ್ಯೂಯಾರ್ಕ್ ನಗರದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಹರಿದಿತ್ತು ಕಟ್ಟಡಗಳು, ಎಲೆಕ್ಟ್ರಿಕ್ ಕಂಬಗಳು ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ.
ಪ್ರವಾಹದಿಂದಾಗಿ ನ್ಯೂಜೆರ್ಸಿ ಹಾಗೂ ನ್ಯೂಯಾರ್ಕ್ನ ಮುಖ್ಯ ರಸ್ತೆಗಳು ಬಂದ್ ಆಗಿವೆ. ಅಗ್ನಿಶಾಮಕದಳ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಥಳೀಯ ಮಾಧ್ಯಮದ ಮಾಹಿತಿಯ ಪ್ರಕಾರ ನ್ಯೂಜೆರ್ಸಿಯಲ್ಲಿ ಕನಿಷ್ಟ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಸಂಖ್ಯೆಯ ಜನರು ವಾಹನದೊಳಗೆ ಸಿಲುಕಿ ಸಾವನ್ನಪ್ಪಿದವರೇ ಇದ್ದಾರೆ ಎಂದು ಅಂದಾಜಿಸಲಾಗಿದೆ.