ಮಂಗಳೂರು: ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಇರಿತಕ್ಕೊಳಗಾದವರನ್ನು ಬಾಗಲಕೋಟೆ ಮೂಲದ ನಿಂಗಣ್ಣ ಎಂದು ಗುರುತಿಸಲಾಗಿದೆ. ಚೂರಿ ಎದುರುಪದವು ನಿವಾಸಿ ದಿವಾಕರ್ ಯಾನೆ ದೀವ ತಂಡದಿಂದ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಮದ್ಯಪಾನದ ಅಮಲಿನಲ್ಲಿ ನಿಂಗಣ್ಣ ಹಾಗೂ ತಂಡದೊಂದಿಗೆ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಕೊನೆಗೆ ಚೂರಿ ಇರಿಯುವ ಹಂತಕ್ಕೆ ಹೋಗಿದೆ.
ಚೂರಿ ಇರಿತದ ಪರಿಣಾಮ ನಿಂಗಣ್ಣ ತಲೆಗೆ ಗಂಭೀರ ಗಾಯವಾಗಿದ್ದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾವೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.
ಮಂಗಳೂರು: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ
