Ad Widget .

ಪ್ಯಾರಾಲಂಪಿಕ್: ಹೈಜಂಪ್ ನಲ್ಲಿ ಬೆಳ್ಳಿ ಗೆದ್ದ ಪ್ರವೀಣ್ ಕುಮಾರ್

Ad Widget . Ad Widget .

ಟೋಕಿಯೋ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಹೈ ಜಂಪ್ ನಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

Ad Widget . Ad Widget .

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ T64 ಈವೆಂಟ್ ನಲ್ಲಿ ಭಾರತದ ಪ್ರವೀಣ್ ಕುಮಾರ್ 2.07 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ 2ನೇ ಸ್ಥಾನಕ್ಕೇರಿದರು.ಆ ಮೂಲಕ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ತಂದುಕೊಟ್ಟರು.

ಇದೇ ಪಂದ್ಯದಲ್ಲಿ ಬ್ರಿಟನ್ ನ ಜೋನಾಥನ್ ಬ್ರೂಮ್ ಎಡ್ವರ್ಡ್ಸ್ ಅವರು 2.10 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ ಚಿನ್ನದ ಪದಕ ಗೆದ್ದರೆ, 2.04 ಮೀಟರ್ ಎತ್ತರಕ್ಕೆ ಜಿಗಿದ ಪೋಲೆಂಡ್ ನ ಮ್ಯಾಕೀಜ್ ಲೆಪಿಯಾಟೊ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡರು.

ಇನ್ನು ಈ ಬೆಳ್ಳಿ ಪದಕದ ಮೂಲಕ ಹಾಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 11ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2 ಚಿನ್ನ, 6 ಬೆಳ್ಳಿ ಮತ್ತು 3 ಕಂಚಿನ ಪದಕಗಳಿವೆ.

Leave a Comment

Your email address will not be published. Required fields are marked *