Ad Widget .

ಬಂಟ್ವಾಳ: ಬಾಲಕನ ಬಲಿ ಪಡೆದ ಕಲ್ಲಿನ ಕೋರೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಂಟ್ವಾಳ: ನೀರು ತುಂಬಿದ್ದ ಕಲ್ಲಿನ ಕೋರೆಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡಿನಲ್ಲಿ ನಡೆದಿದೆ.

Ad Widget . Ad Widget . Ad Widget .

ಸಾಧಿಕ್ ಎಂಬವರ ಪುತ್ರ 6ನೇ ತರಗತಿ ವಿದ್ಯಾರ್ಥಿ ಸವಾದ್ (12) ಮೃತ ಬಾಲಕ. ಈತ ಮತ್ತು ಸ್ಥಳೀಯ ಮಕ್ಕಳು ಸೇರಿಕೊಂಡು ಕೆಂಪು ಕಲ್ಲಿನ ಕೋರೆ ಬಳಿ ಆಟವಾಡುತ್ತಿದ್ದರು. ಇದೇ ವೇಳೆ ಸವಾದ್ ಎಂಬಾತ ಕಾಲು ಜಾರಿ ನೀರು ತುಂಬಿದ್ದ ಕಲ್ಲಿನ ಕೋರೆಯ ಗುಂಡಿಗೆ ಬಿದ್ದಿದ್ದಾನೆ. ತಕ್ಷಣ ಜೊತೆಗಿದ್ದ ಬಾಲಕರು ಆತನ ಮನೆಯವರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದು ನೀರಿನಲ್ಲಿ ಬಿದ್ದಿದ್ದ ಸವಾದ್‍ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಅದಾಗಲೇ ಬಾಲಕ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದು, ಬಳಿಕ ಬಾಲಕನ ಮರಣೋತ್ತರ ಪರೀಕ್ಷೆಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ನಗರ ಪೆÇಲೀಸ್ ಠಾಣಾ ಎಸ್.ಐ. ಅವಿನಾಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *