ಸಾರ್ವಜನಿಕ ಗಣೇಶೋತ್ಸವ ಕ್ಕೆ ಷರತ್ತುಬದ್ದ ಅನುಮತಿ


ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಕ್ಕೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು ಷರತ್ತುಬದ್ಧ ಅನುಮತಿ ನೀಡಲಾಗಿದೆ.

Ad Widget ... ..

ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ.
ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಈ ನಿರ್ಧಾರ ಕೈಗೊಂಡಿದ್ದು, ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು, ಮೆರವಣಿಗೆಗೆ ಅವಕಾಶ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Ad Widget

ಮನೋರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ, ಪ್ರತಿಷ್ಠಾಪನೆ ಮಾಡಬಹುದು. ಆದರೆ ಮೆರವಣಿಗೆ ಮಾಡುವಂತಿಲ್ಲ. ಸ್ಟೇಜ್ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಗೈಡ್ ಲೈನ್ ನೀಡಲಾಗಿದೆ.

Leave a Comment

Your email address will not be published. Required fields are marked *