Ad Widget .

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ| ಬಾಲಕನ ಬಲಿ ಪಡೆದ ಬಾವಲಿ ಜ್ವರ

Ad Widget . Ad Widget .

ಕೋಝಿಕೋಡ್: ಕೇರಳದಲ್ಲಿ ಆತಂಕ ಮೂಡಿಸಿದ್ದ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದೆ. ರಾಜ್ಯದ ಕೋಳಿಕೋಡ್ ನಲ್ಲಿ 13 ವರ್ಷದ ಬಾಲಕ ನಿಫಾ ವೈರಸ್ ನಿಂದ ಸಾವನ್ನಪ್ಪಿದ್ದಾನೆ ಎಂದು ಆರೋಗ್ಯ ಇಲಾಖೆ ಮೂಲಗಳು ಭಾನುವಾರ ತಿಳಿಸಿವೆ.

Ad Widget . Ad Widget .

ಸೋಂಕಿಗೊಳಗಾಗಿರುವ ಬಾಲಕ ಛತಮಂಗಳಂ ಹತ್ತಿರ ಬಳಿಯಿರುವ ಚುಲೂರ್ ಮೂಲದವನೆಂದು ತಿಳಿದುಬಂದಿದೆ.ಪುಣೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾದ ಹುಡುಗನ ಮಾದರಿಗಳು ನಿಫಾ ವೈರಸ್ ಇರುವಿಕೆಯನ್ನು ದೃಢಪಡಿಸಿವೆ.

ಕೇಂದ್ರ ಸರ್ಕಾರವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ತಂಡವನ್ನು ರಾಜ್ಯಕ್ಕೆ ರವಾನಿಸಿದೆ, ಅದು ಭಾನುವಾರ ತಲುಪಲಿದೆ. ತಂಡವು ರಾಜ್ಯಕ್ಕೆ ತಾಂತ್ರಿಕ ಬೆಂಬಲವನ್ನು ನೀಡಲಿದೆ.

ನಿಫಾ ವೈರಸ್ ಹಣ್ಣಿನ ಬಾವಲಿಗಳ ಲಾಲಾರಸದಿಂದ ಹರಡುತ್ತದೆ. ನಿಫಾ ಸೋಂಕಿನ ಶಂಕೆ ವ್ಯಕ್ತವಾಗಿರುವ ಮಾಹಿತಿಯ ನಂತರ ರಾಜ್ಯ ಸರ್ಕಾರ ಶನಿವಾರ ಆರೋಗ್ಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.

ಕೆಲ ದಿನಗಳ ಹಿಂದಷ್ಟೇ ಬಾಲಕ ಅತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದ. ಪ್ರಾಥಮಿಕ ಪರೀಕ್ಷೆಗಳಿಂದ ಬಾಲಕನಿಗೆ ನಿಫಾ ವೈರಸ್ ಸೋಂಕು ಇರುವ ಶಂಕೆಗಳು ವ್ಯಕ್ತವಾಗಿವೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *