ಉಪ್ಪಿನಂಗಡಿ‌| ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಭೀಕರ ಅಪಘಾತ| ಯಮಸ್ವರೂಪಿಯಾದ ಲಾರಿ ಹಾಗೂ ಕಂಟೈನರ್| ಇಬ್ಬರು ದುರ್ಮರಣ

Ad Widget ... ..

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಹಾಗೂ ನೆಲ್ಯಾಡಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕ ಸೇರಿ‌ ಇಬ್ಬರು ದುರ್ಮರಣ ಹೊಂದಿದ್ದಾರೆ.

Ad Widget

ಉಪ್ಪಿನಂಗಡಿಯ ಬೈಪಾಸ್ ನಲ್ಲಿ ಬುಲೆಟ್ ಟ್ಯಾಂಕರ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅಪಘಾತವೂ ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಇದೇ ಹೆದ್ದಾರಿಯ ನೆಲ್ಯಾಡಿ ಸಮೀಪ ಲಾರಿ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ‌ ಎಂಬಲ್ಲಿ ಸೋಮವಾರದಂದು ನಡೆದಿದೆ. ಎಂಜಿರ ಮಲ್ನಾಡ್ ಹೊಟೇಲ್ ಸಮೀಪದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸಾವನ್ನಪ್ಪಿದ ವ್ಯಕ್ತಿಯ ಗುರುತು ಇನ್ನಷ್ಟೇ ತಿಳಿಯಬೇಕಿದೆ.

Leave a Comment

Your email address will not be published. Required fields are marked *