Ad Widget .

ಶಾಸಕ ಎನ್ ಮಹೇಶ್ ಗೆ ಪತ್ನಿ‌ ವಿಯೋಗ|

Ad Widget . Ad Widget .

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್‌ಗೆ ಪತ್ನಿ ವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಾ ಮಹೇಶ್(66) ತಡರಾತ್ರಿ 11ಗಂಟೆ ವೇಳೆಗೆ ನಿಧನರಾಗಿದ್ದಾರೆ.

Ad Widget . Ad Widget .

ಬೆಂಗಳೂರಿನ ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇರುವ ಕಾನ್ಶ್ ಫೌಂಡೇಶನ್‌ನಲ್ಲಿ ಶಾಸಕ ಎನ್.ಮಹೇಶ್‌ರ ಪತ್ನಿ ವಿಜಯಾ ಮಹೇಶ್ ಅಂತ್ಯಕ್ರಿಯೆ ನೆರವೇರಲಿದೆ.

ಶಾಸಕ ಎನ್.ಮಹೇಶ್‌ ಮತ್ತು ವಿಜಯಾ ಇಬ್ಬರದ್ದು ಲವ್ ಕಂ ಅರೇಂಜ್ ಮ್ಯಾರೇಜ್. ಇವರಿಬ್ಬರು ಒಂದೇ ಕಡೆ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಪ್ರೀತಿ ಹುಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ಸುಮಾರು 37 ವರ್ಷಗಳ ಸುಖಕರ ದಾಂಪತ್ಯ ಜೀವನ ನಡೆಸಿದ್ದಾರೆ. ವಿಜಯ ಮೂಲತಃ ಕನಕಪುರದವರು. ಮೈಸೂರಿನ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರಿಗೆ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿತ್ತು.ಬೆಂಗಳೂರಿನ ಅಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ತಡರಾತ್ರಿ 11ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಕಳೆದು ಒಂದು ವರ್ಷದ ಹಿಂದೆಯಷ್ಟೇ ಮಗನಿಗೆ ಮದುವೆ ಮಾಡಲಾಗಿತ್ತು

Leave a Comment

Your email address will not be published. Required fields are marked *