Ad Widget .

ಮೇಯಲು ಬಿಟ್ಟ ಎಮ್ಮೆಗೆ ಗುಂಡಿಕ್ಕಿದ ಕಿಡಿಗೇಡಿಗಳು| ಮತ್ತೊಂದು ಅಮಾನವೀಯ ಘಟನೆಗೆ ಸಾಕ್ಷಿಯಾದ ಕರಾವಳಿ|

Ad Widget . Ad Widget .

ಬೆಳ್ತಂಗಡಿ : ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡುಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ನಡೆದಿದೆ.

Ad Widget . Ad Widget .

ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬವರ ಹಾಲು ಕರೆಯುವ ಸುಮಾರು 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು.

ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಸಮೀಪದ ಫಲಸ್ತಡ್ಕ ಎಂಬಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದೆ. ಎಮ್ಮೆಯ ಮೈಮೇಲೆ ಗುಂಡಿನ ಗಾಯಗಳು ಕಂಡುಬಂದಿದ್ದು ಬೇಟೆಗಾರರ ಗುಂಡೇಟಿಗೆ ಬಲಿಯಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಜತೆ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ತಿಂಗಳು ಇದೇ ರೀತಿಯ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ‌ ಇಂತಹುದೇ ಮತ್ತೊಂದು ಪ್ರಕರಣ ನಡೆದಿದ್ದು, ಕರಾವಳಿಯು ತಲೆತಗ್ಗಿಸುವಂತಾಗಿದೆ.

Leave a Comment

Your email address will not be published. Required fields are marked *