Ad Widget .

ಗುಡ್ ನ್ಯೂಸ್| ನಿಟ್ಟುಸಿರು ಬಿಟ್ಟ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ‌ 2 ಕ್ಕಿಂತ ಕಡಿಮೆ|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget .

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಿರುವ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಶೇ. 1.99 ಮತ್ತು ಕೊಡಗು ಜಿಲ್ಲೆಯಲ್ಲಿ ಶೇ. 1.95 ಕೊರೋನಾ ಪಾಸಿಟಿವಿಟಿ ದರ ದಾಖಲಾಗುವುದರೊಂದಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ದಕ್ಷಿಣ ಕನ್ನಡ ಮತ್ತು ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚು ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಈಗ ಪಾಸಿಟಿವಿಟಿ ದರ ಇಳಿಕೆಯಾಗಿದೆ.

ಹೀಗಾಗಿ ಜನರಲ್ಲಿ ಆತಂಕವನ್ನು ಸ್ವಲ್ಪ ಕಡಿಮೆ ಮಾಡಿದೆ.

ಕರ್ನಾಟಕದಲ್ಲಿ ಕೊರೋನಾ ಏರಿಳಿತ, ಇಂದು (ಸೆ.7) ಭಾರೀ ಇಳಿಕೆ

ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಪಾಸಿಟಿವಿಟಿ ದರ ದಾಖಲಾಗುತ್ತಿತ್ತು. ಆಗಸ್ಟ್‌ ಕೊನೆಯ ವಾರದ ಹೊತ್ತಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಹೊರತು ಪಡಿಸಿ ಉಳಿದ ಜಿಲ್ಲೆಗಳ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಆಗಿತ್ತು. ಆದರೆ ಕೇರಳದೊಂದಿಗೆ ಹೆಚ್ಚು ನಂಟು ಹೊಂದಿರುವ ಗಡಿ ಜಿಲ್ಲೆಗಳಾದ ಕೊಡಗು ಮತ್ತು ದಕ್ಷಿಣ ಕನ್ನಡದಲ್ಲಿ ಪಾಸಿಟಿವಿಟಿ ದರ ನಿರೀಕ್ಷಿತ ಪ್ರಮಾಣದಲ್ಲಿ ಇಳಿಯುತ್ತಿರಲಿಲ್ಲ. ಆದರೆ ಈಗ ಸೆಪ್ಟೆಂಬರ್‌4ರ ಆರೋಗ್ಯ ಇಲಾಖೆ ನೀಡಿರುವ ವರದಿಯಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಾಗಿದೆ ಎಂದು ತಿಳಿಸಿದೆ.

ಸದ್ಯ ಉಡುಪಿ (ಶೇ. 1.31), ಹಾಸನ (ಶೇ.1.21), ಮೈಸೂರು (ಶೇ.1.13), ಕೋಲಾರ (ಶೇ.1.11), ಶಿವಮೊಗ್ಗ (ಶೇ. 0.92), ಚಿಕ್ಕಮಗಳೂರು (ಶೇ.0.89), ಉತ್ತರ ಕನ್ನಡ (ಶೇ.0.73) ಜಿಲ್ಲೆಯಲ್ಲಿ ಪಾಸಿಟಿವಿಟಿ ದರವಿದ್ದು, ರಾಜ್ಯದ ಪಾಸಿಟಿವಿಟಿ ದರ ಶೇ.0.71ಕ್ಕಿಂತ ಹೆಚ್ಚು ಸೋಂಕಿನ ದರ ಹೊಂದಿದೆ.

Leave a Comment

Your email address will not be published. Required fields are marked *