ವೇಗ ಮತ್ತು ಸ್ಪಿನ್ ದಾಳಿಯ ಮೂಲಕ ಎದುರಾಳಿಗಳನ್ನು ಕಂಗೆಡಿಸಿದ ಭಾರತ ತಂಡ ಇಂಗ್ಲೆಂಡ್ ಎದುರಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 157 ರನ್‌ಗಳ ಗೆಲುವು ಸಾಧಿಸಿತು.
ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಬಿಟ್ಟುಕೊಟ್ಟರೂ ಎರಡನೇ ಇನಿಂಗ್ಸ್‌ನಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ ಭಾರತ ಮುಂದಿಟ್ಟ 368 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಆತಿಥೇಯ ತಂಡ 92.2 ಓವರ್‌ಗಳಲ್ಲಿ 210 ರನ್‌ಗಳಿಗೆ ಪತನಗೊಂಡಿತು. ಐದು ಪಂದ್ಯಗಳ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿತು.
147 ರನ್‌ಗಳಿಗೆ ಆರು ವಿಕೆಟ್ ಕಳೆದುಕೊಂಡು ಭೋಜನಕ್ಕೆ ತೆರಳಿದ ಇಂಗ್ಲೆಂಡ್‌ಗೆ ವಿರಾಮದ ನಂತರ ಶಾರ್ದೂಲ್ ಮತ್ತೊಮ್ಮೆ ಪೆಟ್ಟು ನೀಡಿದರು. ನಾಯಕ ಜೋ ರೂಟ್ ವಿಕೆಟ್ ಉರುಳಿಸಿ ಸಂಭ್ರಮಿಸಿದರು. ಚಹಾ ವಿರಾಮದ ವೇಳೆ ತಂಡ 193 ರನ್‌ಗಳಿಗೆ ಎಂಟು ವಿಕೆಟ್ ಕಳೆದುಕೊಂಡಿತು.