ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಆಕೆ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿರುವ ಸಂತಸ್ತ ಬಾಲಕಿ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದು ಘಟನೆ ಬೆಳಕಿಗೆ ಬಂದಿದೆ.
ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದು, ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ಆ ಬಳಿಕ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ತಲೆ ಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಆತನಿಗಾಗಿ ಶೋಧ ಮುಂದುವರಿಸಿದ್ದಾರೆ. ಬಂಟ್ವಾಳ ಪೊಲೀಸ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.