Ad Widget .

ಉತ್ತರಪ್ರದೇಶ ವಿಧಾನಸಭಾ ಚುನಾವಣೆ| ಶೋಭಾ ಕರಂದ್ಲಾಜೆಗೆ ಪ್ರಮುಖ ಹೊಣೆಗಾರಿಕೆ

ನವದೆಹಲಿ: 2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಿದ್ಧತೆಯನ್ನು ಬಿಜೆಪಿ ಆರಂಭಿಸಿದೆ. ಐವರು ಕೇಂದ್ರ ನಾಯಕರನ್ನು ಬಿಜೆಪಿ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಇವರಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಸೇರಿದ್ದಾರೆ.

Ad Widget . Ad Widget .

ಬುಧವಾರ ಬಿಜೆಪಿ ಈ ಕುರಿತು ಆದೇಶ ಹೊರಡಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಇವರ ಜೊತೆ ಐವರು ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ.

Ad Widget . Ad Widget .

ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಕರಂದ್ಲಾಜೆ ಜೊತೆಗೆ ಅನುರಾಗ್ ಠಾಕೂರ್, ಅರ್ಜುನ್ ರಾಮ್ ಮೇಘ್ವಾಲ್, ಅನ್ನಪ್ರಾಣಾ ದೇವಿ ಕೂಡಾ ಸಹ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ

Leave a Comment

Your email address will not be published. Required fields are marked *