Ad Widget .

ಗಣಪತಿ ಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳು ಗ್ರಾಮಸ್ಥರಿಂದ ಹೆಚ್ಚಿದ ಆಕ್ರೋಶ

Ad Widget . Ad Widget .

ಚಿತ್ರದುರ್ಗ: ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಗ್ರಾಮದ ಯುವಕರು ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದರು. ಆದರೆ ತಡರಾತ್ರಿ ಗಣಪತಿ ಮೂರ್ತಿಯನ್ನ ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಈ ಕೃತ್ಯದಿಂದಾಗಿ ಹಿರೇಹಳ್ಳಿ ಗ್ರಾಮಸ್ಥರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸತತ 14 ವರ್ಷಗಳಿಂದ ಗ್ರಾಮದ ಯುವಕರು ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿಕೊಂಡು ಶಾಂತಿಯುತವಾಗಿ ಹಬ್ಬವನ್ನು ಆಚರಿಸಿಕೊಂಡು ಬಂದಿದ್ದರು. ಆದರೆ ಈ ರೀತಿ ಮಾಡಿರುವುದು ಜನರಲ್ಲಿ ಭಯದ ವಾತಾವರಣ ಉಂಟಾಗಿದೆ.

ಪೊಲೀಸರು ಈ ಪ್ರಕರಣ ಕುರಿತು ತನಿಖೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಬೇಕು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *