Ad Widget .

ಮುಂಬೈ: 33 ಗಂಟೆಗಳ ಕಾಲ ಜೀವನ್ಮರಣ ಹೋರಾಟದಲ್ಲಿ ಬದುಕುಳಿಯದ ಅತ್ಯಾಚಾರ ಸಂತ್ರಸ್ತೆ

ಮುಂಬೈ: ಇಲ್ಲಿನ ಸಾಕಿನಾಕಾ ಪ್ರದೇಶದಲ್ಲಿ ಟೆಂಪೋದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ 33 ಗಂಟೆಗಳ ಕಾಲ ಜೀವನ್ಮರಣದ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Ad Widget . Ad Widget .

ಸಾಕಿನಾಕಾ ಪ್ರದೇಶದಲ್ಲಿ ನಿಂತಿದ್ದ ಟೆಂಪೋದಲ್ಲಿ ಮಹಿಳೆಯನ್ನು ಎಳೆದೊಯ್ದು ಕಾಮುಕ ಅತ್ಯಾಚಾರ ನಡೆಸಿದ್ದಲ್ಲದೇ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಚಿತ್ರಹಿಂಸೆ ನೀಡಿದ್ದ. ಅತ್ಯಾಚಾರ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

Ad Widget . Ad Widget .

ಐಪಿಸಿ ಸೆಕ್ಷಣ್ 307, 376, 504ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು 45 ವರ್ಷದ ಆರೋಪಿ ಮೋಹನ್ ಚೌವ್ಹಾಣ್ ನನ್ನು ಬಂಧಿಸಿದ್ದರು. ಆದರೆ ತೀವ್ರ ರಕ್ತಸ್ರಾವ, ಅಂಗಾಂಗ ಗಾಯದಿಂದ ಬಳಲುತ್ತಿದ್ದ ಸಂತ್ರಸ್ತ ಮಹಿಳೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ದೆಹಲಿ ನಿರ್ಭಯಾ ಪ್ರಕರಣವನ್ನು ನೆನಪಿಸುವಂತದ್ದೇ ಪ್ರಕರಣ ಇದಾಗಿದ್ದು, ಈ ಘಟನೆಯ ಹಿಂದೆ ಹಲವರು ಇರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಪ್ರದೇಶದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

Leave a Comment

Your email address will not be published. Required fields are marked *