Ad Widget .

ಮೈಸೂರಿನ ಹಲವು ಅನಧಿಕೃತ ದೇಗುಲಗಳ ತೆರವಿಗೆ ಸುಪ್ರೀಂ ಅನುಮತಿ| ಅನಧಿಕೃತ ಮಸೀದಿ, ಚರ್ಚ್ ಗಳು ಕಾಣೋದಿಲ್ವೇ? – ಪ್ರತಾಪ್ ಸಿಂಹ ಆಕ್ರೋಶ

ಮೈಸೂರು (ಸೆ.12): ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆ ಮೈಸೂರಿನ ನಗರದ ಹಲವು ದೇವಾಲಯಗಳಿಗೆ ನೆಲಸಮ ಭೀತಿ ಎದುರಾಗಿದೆ.
93 ದೇವಾಲಯಗಳನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೈಸೂರು ಮಹಾನಗರ ಪಾಲಿಕೆ ಪಟ್ಟಿ ಮಾಡಿದೆ. ಇದರಲ್ಲಿ ಪ್ರಸಿದ್ಧ ಅಗ್ರಹಾರದ ನೂರೊಂದು ಗಣಪತಿ ದೇವಾಲಯವೂ ಸೇರಿದೆ.

Ad Widget . Ad Widget .

ಇದೇ ತಿಂಗಳ 22ರಂದು ಮೈಸೂರು ನಗರದಲ್ಲಿರುವ 93 ದೇವಾಲಯಗಳ ತೆರವು ಕಾರ್ಯ ಆರಂಭವಾಗಲಿದೆ.
ಚಾಮುಂಡೇಶ್ವರಿ ದೇವಾಲಯ, ವಿದ್ಯಾರಣ್ಯಪುರಂ ರಾಮಲಿಂಗೇಶ್ವರ ದೇವಾಲಯ, ಇಟ್ಟಿಗೆಗೂಡು ದುರ್ಗಾ ಪರಮೇಶ್ವರಿ, ನ್ಯೂ ಸಯ್ಯಾಜಿರಾವ್ ಪಂಚಮುಖಿ ಗಣಪತಿ ದೇವಾಲಯ, ವಿಜಯನಗರ ಚಾಮುಂಡೇಶ್ವರಿ ದೇವಾಲಯಗಳೂ ಸುಪ್ರೀಂಕೋರ್ಟ್ ನೀಡಿದ ಪಟ್ಟಿಯಲ್ಲಿವೆ.

Ad Widget . Ad Widget .

ಇದರಿಂದ ಹಲವು ವಿರೋಧ ವ್ಯಕ್ತವಾಗಿದ್ದು, ದೇವಾಲಯಗಳ ತೆರವಿಗೆ ಸ್ಥಳೀಯರು ಅಸಮಾಧಾನ ಹೊರಹಾಕಿದ್ದು, ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಮೈಸೂರಿನ ಸುಮಾರು 90ರಷ್ಟು ದೇವಸ್ಥಾನ ನೆಲಸಮ ಮಾಡುತ್ತಾರಂತೆ. ಬರೀ ಹಿಂದೂ ದೇವಸ್ಥಾನ ಮಾತ್ರ ಟಾರ್ಗೆಟ್ ಮಾಡುತ್ತಿದ್ದೀರಾ ಏಕೆ? ಯಾಕೆ ದೇವಸ್ಥಾನ ಮಾತ್ರ ಇರೋದಾ, ಚರ್ಚ್ ಮತ್ತು ಮಸೀದಿ ಇಲ್ಲವೆ ಎಂದು ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ಮೈಸೂರಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ‘ರಾಜ್ಯ ಸರ್ಕಾರ ಮತ್ತೊಮ್ಮೆ ದೇವಾಲಯಗಳ ಪಟ್ಟಿ ಪರೀಲನೆ ಮಾಡಬೇಕು. 2010ರ ರಾಜ್ಯ ಸರ್ಕಾರದ ಆದೇಶವನ್ನ ತಕ್ಷಣ ವಾಪಸ್ ಪಡೆಯಬೇಕು. ಮತ್ತೊಮ್ಮೆ ಸುಪ್ರೀಂಕೋರ್ಟ್ ಮುಂದೆ ಪರಿಷ್ಕೃತ ಪಟ್ಟಿ ಸಲ್ಲಿಸಬೇಕು. ಸಾರ್ವಜನಿಕವಾಗಿ ತೊಂದರೆಯಾಗುವ ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳನ್ನು ಪ್ರತ್ಯೇಕ ಪ್ರಕರಣವಾಗಿ ಪರಿಗಣಿಸಿ. ಸ್ಥಳಿಯರೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಿ. ಇಲ್ಲವಾದರೆ ರಾಜ್ಯಾದ್ಯಂತ ದೇವಾಲಯಗಳನ್ನು ಉಳಿಸಿ ಎಂಬ ಅಭಿಯಾನ ಮಾಡಬೇಕಾಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದರು.
ಮೈಸೂರಿನ ಸುಮಾರು 90ರಷ್ಟು ದೇವಸ್ಥಾನ ನೆಲಸಮ ಮಾಡುತ್ತಾರಂತೆ. ಬರೀ ಹಿಂದೂ ದೇವಸ್ಥಾನ ಮಾತ್ರ ಟಾರ್ಗೆಟ್ ಮಾಡುತ್ತಿದ್ದೀರಾ ಏಕೆ? ಯಾಕೆ ದೇವಸ್ಥಾನ ಮಾತ್ರ ಇರೋದಾ, ಚರ್ಚ್ ಮತ್ತು ಮಸೀದಿ ಇಲ್ಲವೆ ಎಂದು ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *