ಮಾಜಿ ಸಿಎಂ ಯಡಿಯೂರಪ್ಪರನ್ನು ದಿಢೀರ್ ಭೇಟಿಯಾದ ನಳಿನ್|

Ad Widget ... ..

: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಳೆದ ರಾತ್ರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಈ ವಿದ್ಯಮಾನ ಕುತೂಹಲ ಮೂಡಿಸಿದೆ. ಕಳೆದ ರಾತ್ರಿ ಸರ್ಕಾರಿ ನಿವಾಸದಲ್ಲಿ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಬಿ.ಎಸ್ ವೈ ರನ್ನು ಭೇಟಿ ಮಾಡಿದ್ದಾರೆ.

Ad Widget


ಕೆಲ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಳಿಕ ಪಕ್ಷದ ಕೋರ್ ಕಮಿಟಿ ಸಭೆ ಇನ್ನೂ ನಡೆದಿಲ್ಲ. ಈ ಹಿನ್ನಲೆಯಲ್ಲಿ ಮುಂದಿನ ವಾರದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಇದಕ್ಕೆ ಬಿಎಸ್ ವೈ ರನ್ನು ಆಹ್ವಾನಿಸಲು ಕಟೀಲ್ ತೆರಳಿದ್ದರು ಎಂದು ಹೇಳಲಾಗಿದೆ. ಇನ್ನು ಇದೇ ಸಂದರ್ಭ ಪಕ್ಷ ಸಂಘಟನೆ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *