Ad Widget .

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ.

Ad Widget . Ad Widget .

6 ತಿಂಗಳ ಬಳಿಕ ಅಧಿವೇಶನ ನಡೆ ಯುತ್ತಿದ್ದು, ಕೊರೊನಾದಿಂದಾಗಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಭೂಕಬಳಿಕೆ ವಿರುದ್ಧ ಕ್ರಮಕ್ಕೆ ತಿದ್ದುಪಡಿ ಮಸೂದೆ, ಬಿಡಬ್ಲ್ಯುಎಸ್‌ಎಸ್‌ಬಿ ತಿದ್ದುಪಡಿ, ಪೌರಸಭೆ, ಶಿಕ್ಷಕರ ವರ್ಗಾವಣೆ ನಿಯಮ ಮಸೂದೆ ಮತ್ತು 4 ಅಧ್ಯಾದೇಶ ಸಹಿತ 18 ಮಸೂದೆಗಳ ಮಂಡನೆಗೆ ಸರಕಾರ ಸಿದ್ಧವಾಗಿದೆ.

Ad Widget . Ad Widget .

ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ, ವರ್ಗಾವಣೆ ದಂಧೆ ಕುರಿತು ಪ್ರಸ್ತಾವಿಸುವುದಾಗಿ ವಿಪಕ್ಷ ಕಾಂಗ್ರೆಸ್‌ ಘೋಷಿಸಿದ್ದು, ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಮಧ್ಯೆ ವಾಕ್ಸಮರ, ಆರೋಪ – ಪ್ರತ್ಯಾರೋಪ, ಬಿಸಿ ಬಿಸಿ ಚರ್ಚೆಗೆ ವೇದಿಕೆಯಾಗಲಿದೆ.

ಬೆಲೆ ಏರಿಕೆಯನ್ನು ವಿನೂತನವಾಗಿ ಪ್ರತಿಭಟಿಸಲು ರಾಜ್ಯ ಕಾಂಗ್ರೆಸ್ ನಾಯಕರು ಸಜ್ಜಾಗಿದ್ದು, ಇಂದಿನಿಂದ ಆರಂಭವಾಗುವ 10 ದಿನಗಳ ವಿಧಾನ ಮಂಡಲ ಅಧಿವೇಶನದಲ್ಲಿ ಭಾಗವಹಿಸಲು ಎತ್ತಿನ ಗಾಡಿಯಲ್ಲಿ ತೆರಳಲಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ನಿವಾಸದಿಂದ ಎತ್ತಿನ ಗಾಡಿಯಲ್ಲಿ ವಿಧಾನಸೌಧಕ್ಕೆ ತೆರಳುತ್ತಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೊರೊನಾ ವೈರಸ್ ನಿರ್ವಹಣೆ, ಕೊರೊನಾ ವೈರಸ್ ಲಸಿಕೆ ಹಾಗೂ ಪ್ರಮುಖವಾಗಿ ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಎಲ್ಲವನ್ನೂ ವಿನೂತನವಾಗಿ ಪ್ರತಿಭಟನೆ ಮಾಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನವಿರೋಧಿಯಾಗಿವೆ ಎಂದು ಜನರಿಗೆ ತಿಳಿಸಲು ಕಾಂಗ್ರೆಸ್ ಮುಂದಾಗಿದೆ.

Leave a Comment

Your email address will not be published. Required fields are marked *