ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ 6ನೇ ಸೆಮಿಸ್ಟರ್ ಪರೀಕ್ಷೆ ಹಾಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನು ಆಫ್ ಲೈನ್ ಮೂಲಕ ಸೆ. 30 ರಂದು ನಡೆಸಲು ಸೋಮವಾರ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ನಿರ್ಧರಿಸಿದೆ.
ಇನ್ನು ಎರಡು ದಿನದೊಳಗೆ ಈ ಕುರಿತ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದೆ. 1, 3, 5 ನೇ ಸೆಮಿಸ್ಟರ್ ಮೌಲ್ಯಮಾಪನವನ್ನು ಕೂಡಾ ಶೀಘ್ರ ಮುಗಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
6ನೇ ಸೆಮಿಸ್ಟರ್ ಪರೀಕ್ಷೆ ಇನ್ನೂ ನಡೆದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಕೋರ್ಸುಗಳಿಗೆ ಸೇರ್ಪಡೆಯಾಗಲು ಅಲ್ಲಿ ಆರನೇ ಸೆಮಿಸ್ಟರ್ ಅಂಕಪಟ್ಟಿ ಕೇಳುತ್ತಿರುವುದು ವಿದ್ಯಾರ್ಥಿಗಳಿಗೆ ದಾರಿ ತೋಚದಂತಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಆರನೇ ಸೆಮಿಸ್ಟರ್ ನಲ್ಲಿ ಹಾಕಿರುವ ತರಗತಿಗಳನ್ನು ಶೀಘ್ರ ಪೂರ್ಣಗೊಳಿಸಿ ಪರೀಕ್ಷೆ ನಡೆಸಲು ವಿ.ವಿ ತೀರ್ಮಾನಿಸಿದೆ. ಸೆಪ್ಟೆಂಬರ್ ಕೊನೆಯಲ್ಲಿ ಪರೀಕ್ಷೆ ಆರಂಭವಾದರೆ 10 ದಿನದೊಳಗೆ ಪೂರ್ಣಗೊಳಿಸಿ 15 ದಿನದೊಳಗೆ ಮೌಲ್ಯಮಾಪನ ಮುಗಿಸಿ ಅಕ್ಟೋಬರ್ ಮಧ್ಯದಲ್ಲಿ ಫಲಿತಾಂಶ ಪ್ರಕಟಿಸಬಹುದು ಎಂದು ವಿ.ವಿಯ ಚಿಂತನೆಯಾಗಿದೆ