Ad Widget .

ಮಂಗಳೂರು: ಪತ್ನಿಯ ತಂಗಿಯ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿಗೆ 10 ವರ್ಷ ಜೈಲು

ಮಂಗಳೂರು: ಪತ್ನಿಯ ತಂಗಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೆÇಕ್ಸೋ) ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಶಿಕ್ಷೆಗೊಳಗಾದ ಆರೋಪಿ. ಈತ ತನ್ನದೇ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ 2019ರ ಜೂ.27ರಂದು ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಅನಂತರ ಗರ್ಭಪಾತವಾಗಿತ್ತು. ಬೆಳ್ತಂಗಡಿಯ ಅಂದಿನ ಪೆÇ್ರಬೆಷನರಿ ಡಿವೈಎಸ್‍ಪಿ, ಪ್ರಭಾರ ವೃತ್ತನಿರೀಕ್ಷಕ ಗೋವಿಂದ ರಾಜು ಬಿ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget . Ad Widget .

ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್ ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಅತ್ಯಾಚಾರ ಅಪರಾಧಕ್ಕೆ 7 ವರ್ಷ ಕಠಿಣ ಸಜೆ ಮತ್ತು 5,000 ರೂ. ದಂಡ ಹಾಗೂ ಪೆÇಕ್ಸೋ ಕಾಯಿದೆಯ ಕಲಂನಡಿ 10 ವರ್ಷ ಕಠಿಣ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೆÇಕ್ಸೋ) ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದಾರೆ.

Ad Widget . Ad Widget .

ಎರಡನೇ ಬಾರಿ ಕೃತ್ಯ:
ಅಪರಾಧಿ ನವೀನ್ 2017ರಲ್ಲಿ ಈ ಪ್ರಕರಣದ ಸಂತ್ರಸ್ತೆಯ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದ. ಪರಿಣಾಮ ಈಕೆ ಗರ್ಭವತಿಯಾಗಿದ್ದಳು. ಈ ಬಗ್ಗೆ ಪ್ರಕರಣ ದಾಖಲಾಗಿ ಬಂಧಿಸಲ್ಪಟ್ಟಿದ್ದ ಆರೋಪಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಯುವತಿ ವಯಸ್ಕಳಾದಾಗ ಆಕೆಯನ್ನು ವಿವಾಹವಾಗಿದ್ದ. ವಿವಾಹದ ಬಳಿಕ ಅತ್ತೆ ಮನೆಯಲ್ಲಿಯೇ ವಾಸವಾಗಿದ್ದ ಆತ ಮತ್ತೆ ಹಳೆ ಚಾಳಿ ಮುಂದುವರಿಸಿ ಪತ್ನಿಯ ಅಪ್ರಾಪ್ತ ವಯಸ್ಸಿನ ತಂಗಿ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದ.

ಇದೂ ಓದಿರಿ

Leave a Comment

Your email address will not be published. Required fields are marked *