Ad Widget .

ಬಸ್-ವ್ಯಾಗನರ್ ಮುಖಾಮುಖಿ ಢಿಕ್ಕಿ| ಹೊತ್ತಿ ಉರಿದ‌ ಕಾರು, ಐವರು‌ ದುರ್ಮರಣ

ಜಾರ್ಖಂಡ್: ಬಸ್​ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಈ ಅವಘಡದಲ್ಲಿ ಐವರು ಸಾವನ್ನಪ್ಪಿದ ದಾರುಣ ಘಟನೆ ಜಾರ್ಖಂಡ್​ನ ರಾಮಗರ್ ಜಿಲ್ಲೆಯಲ್ಲಿ ಸಂಭವಿಸಿದೆ. ರಾಜರಪ್ಪ ಪೊಲೀಸ್​ ಠಾಣೆಯ ವ್ಯಾಪಿಯ ಮರಬಂದ ಎಂಬಲ್ಲಿ ಈ ದುರಂತ ವರದಿಯಾಗಿದೆ.

Ad Widget . Ad Widget .

ಅಪಘಾತದಲ್ಲಿ ಬಸ್​​ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ರಾಮಘರ್​ – ಗೋಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್​ ಹಾಗೂ ವಾಗನಾರ್​ ಕಾರು ಬೆಳಗ್ಗೆ 8 ಗಂಟೆ ಸುಮಾರಿಗೆ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್​ ಸೂಪರಿಂಟೆಂಡೆಂಟ್​​ ಪ್ರಭಾತ್​ ಕುಮಾರ್​ ಮಾಹಿತಿ ನೀಡಿದ್ದಾರೆ.
ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಓರ್ವ ಬಾಲಕ ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪಾಟ್ನಾದವರಾಗಿದ್ದು ಅವರ ವಿಳಾಸವನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *