ಬೆಂಗಳೂರು: ಮತ್ತೊಂದು ಭೀಕರ ಅಪಘಾತ| ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Ad Widget ... ..

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಹೊಸೂರು ರಸ್ತೆ ಅತ್ತಿಬೇಲಿ ಸಮೀಪದ ನೆರಳೂರು ಬಳಿ ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

ಮಹಾರಾಷ್ಟ್ರ ಮೂಲದ ಅಂಬ್ಯುಲೆನ್ಸ್ ಹೊಸೂರಿಗೆ ಹೋಗುತ್ತಿದ್ದ ವೇಳೆ ಎದುರಿಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Comment

Your email address will not be published. Required fields are marked *