Ad Widget .

ಉಪ್ಪಿನಂಗಡಿ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

Ad Widget . Ad Widget .

ಉಪ್ಪಿನಂಗಡಿ: ಸರಳಿಕಟ್ಟೆ ಮನೆಯೊಂದಕ್ಕೆ ಕಳ್ಳರು ನುಗ್ಗಿದ್ದು ಸುಮಾರು ಒಂದು ಲಕ್ಷದ ಇಪ್ಪತ್ತು ಸಾವಿರ ಹಣ ಮತ್ತು ಹತ್ತು ಪವನ್ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದ್ದು ಉಪ್ಪಿನಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಸರಳಿಕಟ್ಟೆ ಬೇನಪ್ಪು ನಿವಾಸಿ ಅಬೂಬಕ್ಕರ್ ಮದನಿ ರವರ ಮನೆಗೆ ಕಳ್ಳರು ನುಗ್ಗಿದ್ದು ಇಂದು ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನ .ಪಿ.ಕುಮಾರ್, ಪುತ್ತೂರು ಗ್ರಾಮಾಂತ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಉಪ ನಿರೀಕ್ಷಕ ಕುಮಾರ್ ಸಿ ಕಾಂಬ್ಳೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಬೆರಳಚ್ಚು ತಙ್ಞರು ಸ್ಥಳಕ್ಕೆ ಆಗಮಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *