Ad Widget .

ಮೈಸೂರು: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆಯ ಅತ್ಯಾಚಾರ| ಆರೋಪಿ ಬಂಧನ

Ad Widget . Ad Widget .

ಮೈಸೂರು, ಸೆಪ್ಟೆಂಬರ್ 17: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಲೀಕತ್ವದ ಫಾರಂ ಹೌಸ್‌ನಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Ad Widget . Ad Widget .

ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೆ.13ರಂದು ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಅತ್ಯಾಚಾರ ನಡೆಸಿದ್ದಾನೆ ಎಂಬುದು ಗೊತ್ತಾಗಿದೆ.
ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಅತ್ಯಾಚಾರ ನಡೆದಿರುವ ಬಗ್ಗೆ ಯಾರಿಗೂ ಹೇಳದಂತೆ ಆರೋಪಿಯು ಯುವತಿಗೆ ಬೆದರಿಕೆ ಹಾಕಿದ್ದನು ಎಂದು ಗೊತ್ತಾಗಿದೆ. ಈ ಹಿನ್ನೆಲೆ ಸೆಪ್ಟೆಂಬರ್ 13ರಂದು ನಡೆದಿರುವ ಘಟನೆ ಕುರಿತು ನಾಲ್ಕು ದಿನಗಳ ನಂತರ ಗೊತ್ತಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿಯನ್ನು ಬಂಧಿಸಿದ ಮಹಿಳಾ ಠಾಣೆ ಪೊಲೀಸರು:

ನಟ ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆ ಮೇಲೆ ನಡೆದಿರುವ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 16ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕ್ರಮಕ್ಕೆ ಮುಂದಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Leave a Comment

Your email address will not be published. Required fields are marked *