ಬೆಂಗಳೂರು: ಮರಗಳನ್ನೇ ತನ್ನ ಮಕ್ಕಳೆಂದು ಸಾಕಿ ಸಲಹುತ್ತಾ ಪರಿಸರಕ್ಕಾಗಿ ತಮ್ಮ ಬದುಕನ್ನೇ ಮುಡಿಪಿಟ್ಟ ವೃಕ್ಷಮಾತೆ 111 ವರ್ಷದ ಶತಾಯುಷಿ ಸಾಲುಮರದ ತಿಮ್ಮಕ್ಕರಿಗೆ ಅಂತರಾಷ್ಟ್ರೀಯ ಸಂಸ್ಥೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಂಗಳೂರಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಫಲಕ ನೀಡಿ ಗೌರವಿಸಿದ್ದಾರೆ.
80 ವರ್ಷಗಳಲ್ಲಿ ಪರಿಸರ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿರುವ ಮಹಿಳೆ, 80 ವರ್ಷದಲ್ಲಿ 8 ಸಾವಿರ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಅವರು ನೆಟ್ಟ ಸಸಿಗಳು ಈಗ ಫಲನೀಡುತ್ತಾ ಸಮಾಜಕ್ಕೆ ಆಸ್ತಿಯಾಗಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿರುವ ಅಂತಾಷ್ಟ್ರೀಯ ಮಟ್ಟದ ಸಂಸ್ಥೆಯೊಂದು ರಾಜ್ಯಪಾಲರ ಮೂಲಕ ಗೌರವಪೂರ್ವಕವಾಗಿ ಪ್ರಶಸ್ತಿ ನೀಡಿದೆ.